3 ವರ್ಷದ ಬಾಲಕಿ ಮೇಲೆ ರೇಪ್: ಆರೋಪಿಯನ್ನು ಎನ್ಕೌಂಟರ್ ಮಾಡಿದ ಪೊಲೀಸರು!

ಲಕ್ನೋ:- 3 ವರ್ಷದ ಬಾಲಕಿ ಮೇಲೆ ರೇಪ್ ಮಾಡಿದ ಆರೋಪಿಯನ್ನು ಪೊಲೀಸರು ಎನ್ಕೌಂಟರ್ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ಜರುಗಿದೆ. ದೀಪಕ್ ವರ್ಮಾ ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದ ಆರೋಪಿ.
ಅಲಂಬಾಗ್ ಮೆಟ್ರೋ ನಿಲ್ದಾಣದ ಬಳಿಯ ಸೇತುವೆಯ ಕೆಳಗೆ ತನ್ನ ತಾಯಿಯೊಂದಿಗೆ ಮಲಗಿದ್ದ ಮೂರು ವರ್ಷದ ಬಾಲಕಿ ಮಲಗಿದ್ದಳು. ಬಾಲಕಿಯನ್ನು ಅಪಹರಿಸಿದ ಬಳಿಕ ದೀಪಕ್ ವರ್ಮಾ ಬೆಳಗ್ಗೆ 3:30ಕ್ಕೆ ಸ್ಕೂಟರ್‌ನಲ್ಲಿ ಪರಾರಿಯಾಗುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ಕೃತ್ಯ ಬೆಳಕಿಗೆ ಬಂದ ಬೆನ್ನಲ್ಲೇ ಆರೋಪಿ ಬಂಧನಕ್ಕೆ ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಅಷ್ಟೇ ಅಲ್ಲದೇ ಸುಳಿವು ನೀಡಿದವರಿಗೆ 1 ಲಕ್ಷ ರೂ. ಬಹುಮಾನವನ್ನು ಘೋಷಿಸಲಾಗಿತ್ತು.
ಸ್ಕೂಟರ್‌ನ ನೋಂದಣಿ ವಿವರಗಳು ಮತ್ತು ಸುಳಿವು ಆಧರಿಸಿ ಕಂಟೋನ್ಮೆಂಟ್‌ನ ದೇವಿ ಖೇಡಾ ಬಳಿ ಪೊಲೀಸರು ದೀಪಕ್‌ನನ್ನು ತಡೆದು ಶರಣಾಗುವಂತೆ ಸೂಚಿಸಿದ್ದಾರೆ. ಆದರೆ ಆತ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾನೆ. ಈ ಸಂದರ್ಭದಲ್ಲಿ ಆತ್ಮರಕ್ಷಣೆಗೆ ಪೊಲೀಸರು ಗುಂಡು ಹಾರಿಸಿದ್ದಾರೆ
ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ. ಪರೀಕ್ಷೆ ನಡೆಸಿದ ವೈದ್ಯರು ಆತ ಮೃತಪಟ್ಟಿದ್ದಾನೆ ಎಂದು ಪ್ರಕಟಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






