5ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ! ಕಾರಣ ನಿಗೂಢ

ಸೆಪ್ಟೆಂಬರ್ 29, 2024 - 21:12
 0  7
5ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ! ಕಾರಣ ನಿಗೂಢ

ನವದೆಹಲಿ: ದಕ್ಷಿಣ ದೆಹಲಿಯ ಸಂಗಮ್ ವಿಹಾರ್ ಪ್ರದೇಶದಲ್ಲಿ ವಿದ್ಯಾರ್ಥಿನಿಯೊಬ್ಬಳು ಕಟ್ಟಡದ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಸತಿ ಸಮುಚ್ಚಯದ ಬೇರೆ ಕಟ್ಟಡದಲ್ಲಿ ವಾಸಿಸುವ ಬಾಲಕಿ ಕಟ್ಟಡದ ಐದನೇ ಮಹಡಿಗೆ ಹೋಗಿ ಅಲ್ಲಿಂದ ಜಿಗಿದ ಘಟನೆ ನಡೆದಿದೆ. ಆಕೆಯಿಂದ ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ,

 ಆದರೆ ಸಿಸಿಟಿವಿ ದೃಶ್ಯಾವಳಿಯಲ್ಲಿ ಆಕೆ ಆರು ಅಂತಸ್ತಿನ ಕಟ್ಟಡದ ಐದನೇ ಮಹಡಿಯಲ್ಲಿ ನಿಂತಿರುವುದು ಕಂಡುಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾಲಕಿಯ ಕುಟುಂಬವು ಘಟನೆ ಸಂಭವಿಸಿದ ಅದೇ ಕಟ್ಟಡದಲ್ಲಿ ವಾಸಿಸುತ್ತಿತ್ತು ಆದರೆ ಸುಮಾರು ಆರು ತಿಂಗಳ ಹಿಂದೆ ಅವರು ಅದೇ ಪ್ರದೇಶದಲ್ಲಿ ಮತ್ತೊಂದು ಮನೆಗೆ ಸ್ಥಳಾಂತರಗೊಂಡರು ಎಂದು ಅಧಿಕಾರಿ ಹೇಳಿದರು.

ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿನಿಯಾಗಿದ್ದ ಬಾಲಕಿಯನ್ನು ಬಾತ್ರಾ ಆಸ್ಪತ್ರೆಗೆ ಕರೆದೊಯ್ದು ನಂತರ ಮಜೀದಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ವೇಳೆ ಆಕೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕ್ರೈಂ ತಂಡ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಏಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

 ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow