50% ಟ್ರಾಫಿಕ್ ಫೈನ್ ಡಿಸ್ಕೌಂಟ್ ಆಫರ್: 15 ದಿನಕ್ಕೆ ಸಂಗ್ರಹವಾದ ದಂಡ ಎಷ್ಟು?
ಬೆಂಗಳೂರು;- ಟ್ರಾಫಿಕ್ ಫೈನ್ ಪಾವತಿಗೆ 50% ಡಿಸ್ಕೌಂಟ್ ನೀಡಿರುವುದಕ್ಕೆ ವಾಹನ ಸವಾರರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಅದರಂತೆ 15 ದಿನಕ್ಕೆ ದಂಡದ ಪಾವತಿ ಮೊತ್ತ 45 ಕೋಟಿ ರೂ. ದಾಟಿದೆ.
ವಾಹನ ಮಾಲೀಕರು 16,21,721 ಬಾಕಿ ಕೇಸ್‌ಗಳಿಗೆ ದಂಡ ಪಾವತಿಸಿದ್ದು, ಇಲ್ಲಿವರೆಗೆ 45.52 ಕೋಟಿ ರೂ. ದಂಡ ಪಾವತಿಯಾಗಿದೆ. ಬೆಂಗಳೂರು ಸಂಚಾರಿ ಪೊಲೀಸರು ವಾಹನ ಸವಾರರಿಗೆ ಆ.23ರಿಂದ ದಂಡ ಪಾವತಿಸಲು ರಿಯಾಯಿತಿ ನೀಡಿದ್ದರು. ಇನ್ನೂ ಸೆ.12ರವರೆಗೆ ದಂಡ ಪಾವತಿ ಮಾಡಲು ಕಾಲಾವಕಾಶವಿದ್ದು, ಕೇವಲ ಬೆಂಗಳೂರು ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿದವರಿಗೆ ಮಾತ್ರ ದಂಡ ಪಾವತಿಸಲು ಅವಕಾಶವಿರುತ್ತದೆ.
ಈ ಕುರಿತು ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅವರು ಆದೇಶ ಹೊರಡಿಸಿ, ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರು ಆ.23ರಿಂದ ಸೆ.12ರವರೆಗೂ ದಂಡದ ಕೇವಲ 50% ಮೊತ್ತವನ್ನು ಪಾವತಿಸುವಂತೆ ರಿಯಾಯಿತಿ ಘೋಷಿಸಿದ್ದರು. ಇದಕ್ಕೆ ವಾಹನ ಮಾಲೀಕರಿಂದ ಅದ್ಭುತ ರೆಸ್ಪಾನ್ಸ್ ಕೇಳಿ ಬಂದಿದೆ.
ನಿಮ್ಮ ಪ್ರತಿಕ್ರಿಯೆ ಏನು?