6 ತಿಂಗಳ ಬಳಿಕ ಇಂದು ಪರಪ್ಪನ ಅಗ್ರಹಾರದಿಂದ ಪವಿತ್ರಾ ಗೌಡಗೆ ಬಿಡುಗಡೆ ಭಾಗ್ಯ!

ಬೆಂಗಳೂರು: ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ಹೈಕೋರ್ಟ್ ಜಾಮೀನು ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆಗಿದ್ದು, ಅವರಿಗೆ ಜಾಮೀನು ನೀಡಲಾಗಿದೆ. ಜೂನ್ ತಿಂಗಳಲ್ಲಿ ಪವಿತ್ರಾ ಗೌಡ ಅರೆಸ್ಟ್ ಆಗಿದ್ದರು. ಬಳಿಕ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿಲಾಗಿತ್ತು. ಹಲವು ತಿಂಗಳ ಬಳಿಕ ಅವರಿಗೆ ಜಾಮೀನು ಸಿಕ್ಕಿದೆ.
ಸದ್ಯ ಪರಪ್ಪನ ಅಗ್ರಹಾರದಿಂದ ಪವಿತ್ರಾ ಗೌಡ ಬಿಡುಗಡೆಯಾಗಲಿದ್ದಾರೆ. 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್‌ನ ನ್ಯಾ. ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು.
ಇಂದು ಬೆಳಗ್ಗೆ ಬಿಡುಗಡೆಯ ಎಲ್ಲಾ ಪ್ರಕ್ರಿಯೆಗಳು ಮುಗಿಯಲಿದೆ. ಪರಪ್ಪನ ಅಗ್ರಹಾರದಿಂದ ಪವಿತ್ರಾ, ಅನುಕುಮಾರ್, ಪ್ರದೂಶ್ ಬಿಡುಗಡೆಯಾದರೆ ಶಿವಮೊಗ್ಗ ಜೈಲಿನಿಂದ ಜಗದೀಶ್, ಲಕ್ಷಣ್, ಕಲಬುರಗಿಯಿಂದ ನಾಗರಾಜ್ ರಿಲೀಸ್ ಆಗಲಿದ್ದಾರೆ. ಇಂದು ಮಧ್ಯಾಹ್ನ ಹೊತ್ತಿಗೆ ಎಲ್ಲಾ ಆರೋಪಿಗಳು ಜೈಲಿನಿಂದ ಹೊರಬರಲಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






