7 ತಿಂಗಳಿಂದೆ ಮದುವೆಯಾಗಿದ್ದ ನವವಿವಾಹಿತೆ ಶವ ರೈಲ್ವೇ ಟ್ರ್ಯಾಕ್‌ನಲ್ಲಿ ಪತ್ತೆ: ವರದಕ್ಷಿಣೆ ಕಿರುಕುಳ ಆರೋಪ!

ಜುಲೈ 5, 2025 - 21:19
 0  25
7 ತಿಂಗಳಿಂದೆ ಮದುವೆಯಾಗಿದ್ದ ನವವಿವಾಹಿತೆ ಶವ ರೈಲ್ವೇ ಟ್ರ್ಯಾಕ್‌ನಲ್ಲಿ ಪತ್ತೆ: ವರದಕ್ಷಿಣೆ ಕಿರುಕುಳ ಆರೋಪ!

ದಾವಣಗೆರೆ:- ನಗರದಲ್ಲಿ ನವವಿವಾಹಿತೆ ಶವ ರೈಲ್ವೇ ಟ್ರ್ಯಾಕ್‌ನಲ್ಲಿ ಪತ್ತೆಯಾಗಿರುವ ಘಟನೆ ಜರುಗಿದೆ. ವಿದ್ಯಾ ಮೃತ ಗೃಹಿಣಿ. ಪ್ರಕರಣಕ್ಕೆ ಸಂಬಂಧಿಸಿದಂತೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆಂದು ಗಂಡನ ಮನೆಯವರ ವಿರುದ್ಧ ಆರೋಪ ಕೇಳಿಬಂದಿದೆ.

ಸೋಮಲಾಪುರ ಗ್ರಾಮದ ಶಿವು ಎಂಬವನ ಜೊತೆ ಕಳೆದ 7 ತಿಂಗಳ ಹಿಂದೆ ವಿದ್ಯಾಳ ಮದುವೆ ಮಾಡಲಾಗಿತ್ತು. ಪತಿ ಶಿವು ಪೊಲೀಸ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಇಬ್ಬರು ಬೆಂಗಳೂರಿನ ಶಂಕರಪುರಂನಲ್ಲಿ ವಾಸವಾಗಿದ್ದರು. ಜೂ.30ರಂದು ವಿದ್ಯಾ ಕಾಣೆಯಾಗಿದ್ದರು. ಈ ಕುರಿತು ಶಂಕರಪುರಂ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಪ್ರಕರಣ ದಾಖಲಾಗಿತ್ತು. ಅದೇ ದಿನ ಸಂಜೆ ಅರಸೀಕೆರೆ ರೈಲ್ವೆ ಟ್ರ‍್ಯಾಕ್ ಬಳಿ ವಿದ್ಯಾ ಪತ್ತೆಯಾಗಿದ್ದಳು, ಆಸ್ಪತ್ರೆಗೆ ಸಾಗಿಸುವ ಮುನ್ನ ಆಕೆ ಸಾವನ್ನಪ್ಪಿದ್ದಳು.

ಸದ್ಯ ವಿದ್ಯಾ ಕುಟುಂಬಸ್ಥರು ಅರಸೀಕರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪತಿ ಶಿವುನನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಸುಮಾರು ನಾಲ್ಕು ತಿಂಗಳಿನಿಂದ ವಿದ್ಯಾಗೆ ಪತಿ ಕುಟುಂಬಸ್ಥರು ವರದಕ್ಷಿಣೆಗಾಗಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರು. ಹೀಗಾಗಿ ಅವರೇ ಆಕೆಯನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow