79ನೇ ಸ್ವಾತಂತ್ರ್ಯ ದಿನಾಚರಣೆ: ಧ್ವಜಾರೋಹಣ ನೆರವೇರಿಸಿದ CM ಸಿದ್ದರಾಮಯ್ಯ!

ಆಗಸ್ಟ್ 15, 2025 - 10:12
 0  23
79ನೇ ಸ್ವಾತಂತ್ರ್ಯ ದಿನಾಚರಣೆ: ಧ್ವಜಾರೋಹಣ ನೆರವೇರಿಸಿದ CM ಸಿದ್ದರಾಮಯ್ಯ!

ಬೆಂಗಳೂರು: 79ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಧ್ವಜಾರೋಹಣ ಮಾಡಿದರು. ನಂತರ ಮಾಣೆಕ್ ಷಾ ಪರೇಡ್ ಮೈದಾನಕ್ಕೆ ತೆರಳಿ ಅಲ್ಲಿ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ಜೀಪ್ನಲ್ಲಿ ಪರೇಡ್ ವೀಕ್ಷಣೆ ಮಾಡಿದರು.

ಬಳಿಕ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಸಮಾರಂಭದಲ್ಲಿ ರಾಜ್ಯ ಸಂಪುಟ ಸಚಿವರು, ರಾಜ್ಯದ ಶಾಸಕರು, ಅಧಿಕಾರಿಗಳು ಹಾಗೂ ಕೆಲವು ಸ್ವಾತಂತ್ರ್ಯ ಹೋರಾಟಗಾರರು ಭಾಗವಹಿಸಿದ್ದಾರೆ ಅದ್ಧೂರಿ ಕಾರ್ಯಕ್ರಮದಲ್ಲಿ 8 ಸಾವಿರ ಜನರು ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿತ್ತು.

ಶಾಲಾ ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ಮೆರಗು ಪಡೆದುಕೊಂಡವು. ಕೆಎಸ್ಆರ್ಪಿ, ಸಿಆರ್ಪಿಎಫ್, ಬಿಎಸ್ ಎಫ್, ಗೋವಾ ಪೊಲೀಸ್ ತಂಡ ಸೇರಿ ವಿವಿಧ ಇಲಾಖೆಯ 35 ತುಕಡಿಗಳಲ್ಲಿ 1,150 ಮಂದಿಯಿಂದ ಪಥ ಸಂಚಲನ ಹಾಗೂ ಸರ್ಕಾರಿ ಮತ್ತು ಬಿಬಿಎಂಪಿಯ 1,150 ವಿದ್ಯಾರ್ಥಿಗಳು ಹಾಗೂ ಕರ್ನಾಟಕ ಪೊಲೀಸ್ ಸಮೂಹ ವಾದ್ಯಮೇಳದ 253 ಅಧಿಕಾರಿ, ಸಿಬ್ಬಂದಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿಸಿತು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow