Pahalgam Attack: ಪಾಕಿಸ್ತಾನಕ್ಕೆ ಭಾರತದಿಂದ ಮತ್ತೊಂದು ಶಾಕ್: ಪಾಕ್ ಸರ್ಕಾರದ x ಅಕೌಂಟ್ ಬ್ಲಾಕ್..!

ಎಪ್ರಿಲ್ 24, 2025 - 14:03
 0  15
Pahalgam Attack: ಪಾಕಿಸ್ತಾನಕ್ಕೆ ಭಾರತದಿಂದ ಮತ್ತೊಂದು ಶಾಕ್: ಪಾಕ್ ಸರ್ಕಾರದ x ಅಕೌಂಟ್ ಬ್ಲಾಕ್..!

ನವದೆಹಲಿಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದಿರುವ ಉಗ್ರರ ನರಮೇಧಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಉಗ್ರರು ಹಾಗೂ ಪಾಕಿಸ್ತಾನದ ವಿರುದ್ಧ ಭಾರತ ಮತ್ತಷ್ಟು ಕಠಿಣ ನಿರ್ಧಾರಗಳನ್ನೇ ತೆಗೆದುಕೊಳ್ಳಬೇಕು ಅನ್ನೋ ಕೂಗು ದೇಶಾದ್ಯಂತ ಜ್ವಾಲಾಮುಖಿಯಂತೆ ಪ್ರತಿಧ್ವನಿಸುತ್ತಿದೆ. ಹಮಾಸ್ ರಕ್ತಿಬಿಜಾಸುರರಿಗೆ ಇಸ್ರೇಲ್ಹೇಗೆ ಬುದ್ಧಿ ಕಲಿಸಿತೋ ಅಷ್ಟೊಂದು ಭಯಾನಕವಾದ ಪ್ರತೀಕಾರವನ್ನು ಭಾರತ ಕೈಗೊಳ್ಳಬೇಕು ಎಂದು ಭಾರತೀಯರು ಒತ್ತಾಯಿಸುತ್ತಿದ್ದಾರೆ.

ಇದೀಗ ಪಾಕ್ವಿರುದ್ಧ ತಿರುಗಿಬಿದ್ದಿರುವ ಭಾರತ, ಪಾಕಿಸ್ತಾನ ಸರ್ಕಾರದ ಎಕ್ಸ್ಖಾತೆಯನ್ನು ಭಾರತದಲ್ಲಿ ಸ್ಥಗಿತಗೊಳಿಸಿದೆ. ಬುಧವಾರ ನಡೆದ ಸಿಸಿಎಸ್ ಸಭೆಯಲ್ಲಿ ಉಗ್ರರ ದಾಳಿಗೆ ಪ್ರತಿಯಾಗಿ, ಸಿಂಧೂ ಜಲ ಒಪ್ಪಂದವನ್ನು ಅನಿರ್ದಿಷ್ಟಾವಧಿ ಸ್ಥಗಿತಗೊಳಿಸುವುದು ಸೇರಿದಂತೆ ಪಾಕಿಸ್ತಾನದ ವಿರುದ್ಧ ಭಾರತ ಹಲವಾರು ಕ್ರಮಗಳನ್ನು ಕೈಗೊಂಡಿತ್ತು. ಇದಾದ ಬಳಿಕ ಈಗ ಪಾಕ್ಸರ್ಕಾರದ ಎಕ್ಸ್ಖಾತೆಯನ್ನು ಭಾರತ ಸ್ಥಗಿತಗೊಳಿಸಿದೆ.

ಪಾಕಿಸ್ತಾನಿ ಪ್ರಜೆಗಳಿಗೆ ಸಾರ್ಕ್ ವೀಸಾ ವಿನಾಯಿತಿ ಯೋಜನೆಯನ್ನು ಬುಧವಾರ ಭಾರತ ಸ್ಥಗಿತಗೊಳಿಸಿತ್ತು. ಇದರ ಅಡಿ ಪಾಕಿಸ್ತಾನಿ ನಾಗರಿಕರಿಗೆ ನೀಡಲಾದ ಯಾವುದೇ ಅಸ್ತಿತ್ವದಲ್ಲಿರುವ ವೀಸಾಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ. 48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಪಾಕ್ಪ್ರಜೆಗಳಿಗೆ ಸೂಚಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿರುವ ಅಟ್ಟಾರಿ-ವಾಘಾ ಗಡಿ ಚೆಕ್ಪೋಸ್ಟ್ನ್ನು  (Attari Border) ತಕ್ಷಣದಿಂದ ಮುಚ್ಚಲು ಆದೇಶಿಸಲಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ತ್ರಿ ತಿಳಿಸಿದ್ದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow