Actor Darshan: ನಟ ದರ್ಶನ್ʼಗೆ ನಿರಾಸೆ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆದಿದೆ. ಕೋರ್ಟ್ನಲ್ಲಿ ಹೆಚ್ಚಿನ ವಾದ-ಪ್ರತಿವಾದಗಳು ನಡೆದಿದ್ದು, ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ. ಹೈಕೋರ್ಟ್ ನಲ್ಲಿ ಇಂದು ನಡೆದ ದರ್ಶನ್ ಜಾಮೀನು ಅರ್ಜಿ ವಿಚಾರಣೆಯಲ್ಲಿ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಸುದೀರ್ಘವಾಗಿ ವಾದ ಮಂಡಿಸಿದರು.
ಇದೀಗ ಬೇಲ್ ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ. ದರ್ಶನ್ ಪರ ವಕೀಲ ಸಿ.ವಿ ನಾಗೇಶ್ ಸುದಿರ್ಘ ವಾದ ಮಂಡಿಸಿದರು. ವಾದ ಆಲಿಸಿದ ಹೈಕೋರ್ಟ್, ಬೇಲ್ ಅರ್ಜಿಯನ್ನು ಮುಂದೂಡಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಬೆನ್ನು ನೋವು ಸಮಸ್ಯೆ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ. ಚಿಕಿತ್ಸೆಗಾಗಿ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಸದ್ಯ ದರ್ಶನ್ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






