Actor Darshan: ಸರ್ಜರಿ ಮಾಡಿಸದೆಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ದರ್ಶನ್!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೊನೆಗೂ 7 ಮಂದಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಕೊಲೆ ಅರೋಪದ ಪ್ರಕರಣದಲ್ಲಿ ಜೈಲು ಸೇರಿದ್ದ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿದ್ದರು. ಈಗ ಅವರಿಗೆ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಒಂದೂವರೆ ತಿಂಗಳಿಂದ ದರ್ಶನ್ ಅವರಿಗೆ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬೌನ್ಸರ್ ಹಾಗೂ ಕುಟುಂಬ ಸದಸ್ಯರ ಜೊತೆ ದರ್ಶನ್ ಅವರು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.
ರೇಣುಕಾಸ್ವಾಮಿ ಕೇಸ್‌ನಲ್ಲಿ ಕಳೆದ ಜೂನ್ 11ರಂದು ನಟ ದರ್ಶನ್ ಅವರನ್ನ ಬಂಧಿಸಲಾಗಿತ್ತು. ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದ ಬಳಿಕ ದರ್ಶನ್ ಅವರು ಬಳ್ಳಾರಿ ಜೈಲಿನಿಂದ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಡಿಸೆಂಬರ್ 13ರಂದು ಹೈಕೋರ್ಟ್ ದರ್ಶನ್‌ಗೆ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ನಿರಾಳರಾಗಿರುವ ದರ್ಶನ್ ಅವರು ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






