Actor Darshan: “ಇದ್ರೆ ನೆಮ್ಮದಿಯಾಗಿರ್ಬೇಕು” ಹಾಡು ರಿಲೀಸ್ʼಗೆ ಹೊಸ ಡೇಟ್ ಫಿಕ್ಸ್!
ದರ್ಶನ್ ನಟನೆಯ ಬಹು ನಿರೀಕ್ಷಿತ ಚಿತ್ರ ಡೆವಿಲ್ (The Devil) ಸಿನಿಮಾದ ಇದ್ರೆ ನೆಮ್ಮದಿಯಾಗಿರ್ಬೇಕು ಎನ್ನುವ ಸಾಂಗ್ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಕೊಲೆ ಪ್ರಕರಣದಲ್ಲಿ, ದರ್ಶನ್, ಪವಿತ್ರಾ ಗೌಡ ಮತ್ತು ನಾಗರಾಜು ಆರ್., ಅನು ಕುಮಾರ್ @ ಅನು, ಲಕ್ಷ್ಮಣ್ ಎಂ, ಜಗದೀಶ್ @ ಜಗ್ಗ ಮತ್ತು ಪ್ರದೂಷ್ ಎಸ್ ರಾವ್ @ ಪ್ರದೂಷ್ ಆರೋಪಿಗಳಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು,
ಎಲ್ಲಾರೂ ಜೈಲಿನಲ್ಲಿದ್ದಾರೆ. ದರ್ಶನ್ ನಟನೆಯ ಬಹು ನಿರೀಕ್ಷಿತ ಚಿತ್ರ ದಿ ಡೆವಿಲ್ ಸಿನಿಮಾದ ಇದ್ರೆ ನೆಮ್ಮದಿಯಾಗಿ ಇರ್ಬೇಕು ಹಾಡು ಆಗಸ್ಟ್ 24ಕ್ಕೆ ಬೆಳಿಗ್ಗೆ 10.05 ಕ್ಕೆ ಸಾಂಗ್ ಬಿಡುಗಡೆ ಆಗಲಿದೆಯೆಂದು ಚಿತ್ರತಂಡ ಘೋಷಣೆ ಮಾಡಿದೆ. ‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಎಂಬುದು ದರ್ಶನ್ ಅವರ ವೈರಲ್ ಆಡಿಯೋನಲ್ಲಿ ಇದ್ದ ಮಾತಾಗಿತ್ತು. ವರ್ಷಗಳ ಹಿಂದೆ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಅಶ್ಲೀಲವಾಗಿ ಬೈದಾಗ ‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಎಂಬ ವಾಕ್ಯವನ್ನು ದರ್ಶನ್ ಬಳಸಿದ್ದರು.
ದರ್ಶನ್ ‘ಡೆವಿಲ್’ ಸಿನಿಮಾದ ಎಲ್ಲ ಕೆಲಸಗಳನ್ನು ಪೂರ್ಣಗೊಳಿಸಿದ್ದಾರೆ. ಸಿನಿಮಾದ ಚಿತ್ರೀಕರಣ, ಡಬ್ಬಿಂಗ್ ಎಲ್ಲ ಕಾರ್ಯವನ್ನೂ ಮುಗಿಸಿದ್ದಾರೆ. ಸಿನಿಮಾದ ಇನ್ನಿತರೆ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳು ಮಾತ್ರವೇ ಬಾಕಿ ಉಳಿದಿದ್ದು, ಅವುಗಳು ಚಾಲ್ತಿಯಲ್ಲಿವೆ. ಸಿನಿಮಾ ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆ ಮಾಡುವುದಾಗಿ ಘೋಷಣೆ ಆಗಿತ್ತು. ದರ್ಶನ್ ಜೈಲಿಗೆ ಹೋಗಿದ್ದರಿಂದ ಸಿನಿಮಾ ಬಿಡುಗಡೆ ತಡವಾಗಬಹುದು ಎಂದು ಅಭಿಮಾನಿಗಳು ಅಂದುಕೊಂಡಿದ್ದರು. ಆದರೆ ಮೂಲಗಳ ಪ್ರಕಾರ ನಿಗದಿಯಂತೆ ಸಿನಿಮಾ ಅಕ್ಟೋಬರ್ ತಿಂಗಳಲ್ಲಿಯೇ ಬಿಡುಗಡೆ ಆಗಲಿದೆ.
ನಿಮ್ಮ ಪ್ರತಿಕ್ರಿಯೆ ಏನು?