Actor Darshan: ಕೇರಳದ ಕೊಟ್ಟಿಯೂರುನ ಶಿವನ ದೇವಸ್ಥಾನದಲ್ಲಿ ನಟ ದರ್ಶನ್..!

ನಟ ದರ್ಶನ್ ರೇಣುಕಾಸ್ವಾಮಿ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗಿದ್ದಾರೆ. ನಟ ದರ್ಶನ್ ಡೆವಿಲ್ ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಪತ್ನಿ ವಿಜಯಲಕ್ಷ್ಮಿ ಸಮೇತ ಕೇರಳದ ಕೊಟ್ಟಿಯೂರ್‌ನಲ್ಲಿರುವ ಶಿವನ ದೇವಸ್ಥಾನಕ್ಕೆ ದರ್ಶನ್ ಭೇಟಿ ಕೊಟ್ಟು ದೇವರ ದರ್ಶನ ಪಡೆದಿದ್ದಾರೆ.
ಕೇರಳದ ಕೊಣ್ಣುರು ಸಮೀಪದಲ್ಲಿರುವ ಕೊಟ್ಟಿಯೂರು ಶಿವ ದೇವಸ್ಥಾನಕ್ಕೆ ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಹಾಗೂ ನಟ ಧನ್ವೀರ್ ಕೂಡ ಸಾಥ್ ನೀಡಿದ್ದಾರೆ. ಈ ವೇಳೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಕೇರಳದ ಕೊಟ್ಟಿಯೂರು ಶಿವ ದೇವಾಲಯವು ಭಾರತದ ಅತ್ಯಂತ ಪ್ರಾಚೀನ ಮತ್ತು ಪವಿತ್ರ ತೀರ್ಥಕ್ಷೇತ್ರಗಳಲ್ಲಿ ಒಂದಾಗಿದೆ.
ಪ್ರತಿವರ್ಷವೂ ವೈಶಾಖ ಮಾಹೋತ್ಸವದ ಸಂದರ್ಭದಲ್ಲಿ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತದೆ. ಈ ದೇವಸ್ಥಾನವು ದಕ್ಷಿಣ ಕಾಶಿ ಎಂದು ಕರೆಯಲ್ಪಡುವುದರಿಂದ ಅದರ ಧಾರ್ಮಿಕ ಮಹತ್ವವು ಅಪಾರವಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






