Actor Darshan: ನಟ ದರ್ಶನ್ʼಗೆ ನಿರಾಸೆ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ನವೆಂಬರ್ 28, 2024 - 17:59
 0  14
Actor Darshan:  ನಟ ದರ್ಶನ್ʼಗೆ ನಿರಾಸೆ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ಹೈಕೋರ್ಟ್​ನಲ್ಲಿ ನಡೆದಿದೆ. ಕೋರ್ಟ್‌‌ನಲ್ಲಿ ಹೆಚ್ಚಿನ ವಾದ-ಪ್ರತಿವಾದಗಳು ನಡೆದಿದ್ದು, ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ. ಹೈಕೋರ್ಟ್ ನಲ್ಲಿ ಇಂದು ನಡೆದ ದರ್ಶನ್ ಜಾಮೀನು ಅರ್ಜಿ ವಿಚಾರಣೆಯಲ್ಲಿ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಸುದೀರ್ಘವಾಗಿ ವಾದ ಮಂಡಿಸಿದರು.

 ಇದೀಗ ಬೇಲ್​ ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿ ಕೋರ್ಟ್​ ಆದೇಶ ಹೊರಡಿಸಿದೆ. ದರ್ಶನ್​​ ಪರ ವಕೀಲ ಸಿ.ವಿ ನಾಗೇಶ್ ಸುದಿರ್ಘ ವಾದ ಮಂಡಿಸಿದರು. ವಾದ ಆಲಿಸಿದ ಹೈಕೋರ್ಟ್, ಬೇಲ್​ ಅರ್ಜಿಯನ್ನು ಮುಂದೂಡಿದೆ.

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಬೆನ್ನು ನೋವು ಸಮಸ್ಯೆ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ. ಚಿಕಿತ್ಸೆಗಾಗಿ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಸದ್ಯ ದರ್ಶನ್ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow