Actor Thalapathy Vijay: ಟೋಪಿ ತೊಟ್ಟು, ಇಫ್ತಾರ್ ಕೂಟದಲ್ಲಿ ದಳಪತಿ ವಿಜಯ್ ಭಾಗಿ: ಅಭಿಮಾನಿಗಳು ಹೇಳಿದ್ದೇನು..?

ತಮಿಳಿನ ಖ್ಯಾತ ನಟ ಆಗಿದ್ದ ದಳಪತಿ ವಿಜಯ್ ಅವರು ಇತ್ತೀಚೆಗೆ ರಾಜಕೀಯಕ್ಕೆ ಪದಾರ್ಪಣೆ ಮಾಡಿದ್ದಾರೆ. ತಮಿಳಗ ವೆಟ್ರಿ ಕಳಗಂ ಎಂಬ ಪಕ್ಷವನ್ನೂ ಕಟ್ಟಿದ್ದಾರೆ. ಅವರು ಸಿನಿಮಾ ಕ್ಷೇತ್ರವನ್ನ ತೊರೆದು, ಪೂರ್ಣ ಸಮಯವನ್ನ ರಾಜಕೀಯಕ್ಕೆ ಮೀಸಲಿಡಲು ನಿರ್ಧಾರ ಮಾಡಿದ್ದಾರೆ.
ಈ ಬೆಳವಣಿಗೆ ಬೆನ್ನಲ್ಲೇ ವಿಜಯ್ ಅವರು ಚೆನ್ನೈನಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಭಾಗಿ ಆಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವಿಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಅಭಿಮಾನಿಗಳು ವಿಜಯ್ ಅವರನ್ನು ಹೊಗಳಿದರೆ, ವಿರೋಧಿಗಳು ಅವರ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದಾರೆ.
ದಳಪತಿ ವಿಜಯ್ ಅವರು 2026ರ ತಮಿಳುನಾಡು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ. ಇದಕ್ಕಾಗಿ ‘ತಮಿಳಗ ವೆಟ್ರಿ ಕಳಗಮ್’ (TVK) ಪಕ್ಷ ಸ್ಥಾಪನೆ ಮಾಡಿದ್ದಾರೆ. ವಿಜಯ್ ಅವರು ತಲೆಗೆ ಟೋಪಿ ಹಾಕಿ ಇಫ್ತಾರಿ ಕೂಟದಲ್ಲಿ ಭಾಗಿ ಆಗಿದ್ದಾರೆ.
ಅವರು ಮುಸ್ಲಿಂ ಸಂಪ್ರದಾಯದಂತೆ ನಡೆದುಕೊಂಡಿದ್ದಾರೆ. ಅವರ ಅಭಿಮಾನಿಗಳು ಇದನ್ನು ಹೊಗಳಿದ್ದಾರೆ. ಎಲ್ಲಾ ಧರ್ಮವನ್ನು ವಿಜಯ್ ಗೌರವಿಸುತ್ತಿದ್ದಾರೆ ಎಂದು ಸಂತಸ ಹೊರಹಾಕಿದ್ದಾರೆ. ಆದರೆ, ಅವರ ವಿರೋಧಿಗಳು ‘ವೋಟ್ ಬ್ಯಾಂಕ್ ರಾಜಕೀಯ’ ಎಂದು ಟೀಕಿಸಿದ್ದಾರೆ.
ವರದಿಗಳ ಪ್ರಕಾರ ವಿಜಯ್ ಅವರು ಮುಂಜಾನೆಯಿಂದ ಉಪವಾಸ ಮಾಡಿದ್ದರು ಎನ್ನಲಾಗಿದೆ. ನಂತರ ರಾತ್ರಿ ವೇಳೆ ಅವರು ಊಟ ಸೇವನೆ ಮಾಡಿದ್ದಾರೆ. ವಿಜಯ್ ಜೊತೆ ಹಲವು ಸ್ಥಳೀಯ ಮುಸ್ಲಿಂ ನಾಯಕರು ಭಾಗಿ ಆಗಿದ್ದಾರೆ. ವಿಜಯ್ ಅವರು ಭಾಗಿ ಆದ ಇಫ್ತಾರ್ ಕೂಟದಲ್ಲಿ 3 ಸಾವಿರಕ್ಕೂ ಅಧಿಕ ಜನರು ಸೇರಿದ್ದರು.
ನಿಮ್ಮ ಪ್ರತಿಕ್ರಿಯೆ ಏನು?






