Actress: ಹಣಕ್ಕಾಗಿ ಅಶ್ಲೀಲ ದೃಶ್ಯಗಳಲ್ಲಿ ನಟನೆ ಆರೋಪ: ನಟಿ ಶ್ವೇತಾ ಕಣ್ಣೀರು – ಕೋರ್ಟ್ ಹೇಳಿದ್ದೇನು..?

ಕನ್ನಡ, ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಟಿ ಶ್ವೇತಾ ಮೆನನ್ ಇದೀಗ ವಿವಾದದಲ್ಲಿ ಸಿಲುಕಿದ್ದಾರೆ. 51ನೇ ವಯಸ್ಸಿನಲ್ಲಿ ಅಶ್ಲೀಲ ಸಿನಿಮಾಗಳಲ್ಲಿ ನಟನೆ ಮಾಡುತ್ತಿದ್ದಾರೆ ಎಂಬ ತೀವ್ರ ಆರೋಪ ಎದುರಾಗಿದೆ. ಸಮಾಜಿಕ ಹೋರಾಟಗಾರ ಮಾರ್ಟಿನ್ ಮೆನಶೆರಿ ಎಂಬವರು ಈ ಸಂಬಂಧ ಎರ್ನಾಕುಲಂ ಸಿಜೆಎಂ ಕೋರ್ಟ್‌ಗೆ ದೂರು ಸಲ್ಲಿಸಿದ್ದು,
ಈ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಶ್ವೇತಾ ಮೆನನ್ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಸಾಮಾಜಿಕ ಕಾರ್ಯಕರ್ತ ಮಾರ್ಟಿನ್ ಮನಶೆರ್ ಸಲ್ಲಿಸಿದ ದೂರಿನಲ್ಲಿ, ಶ್ವೇತಾ ಮೆನನ್ ಹಣಕ್ಕಾಗಿ ಅಶ್ಲೀಲ ವಿಡಿಯೋಗಳು ಮತ್ತು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ಈ ವಿಡಿಯೋಗಳನ್ನು ಅಶ್ಲೀಲ ವೆಬ್‌ಸೈಟ್‌ಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ರಾಷ್ಟ್ರ ಪ್ರಶಸ್ತಿ ವಿಜೇತೆಯಾದ ನಟಿಯ ಈ ಕೃತ್ಯಗಳು ಸಮಾಜದ ಮೇಲೆ, ವಿಶೇಷವಾಗಿ ಯುವ ಜನತೆ ಮತ್ತು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿವೆ ಎಂದು ಆರೋಪಿಸಲಾಗಿದೆ. ಈ ದೂರಿನ ಬೆನ್ನಲ್ಲೇ ಶ್ವೇತಾ ಮೆನನ್ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಜಸ್ಟೀಸ್ ವಿಜಿ ಅರುಣ್ ಅವರ ನೇತೃತ್ವದಲ್ಲಿ ನಡೆದ ವಿಚಾರಣೆಯಲ್ಲಿ, ನಟಿಯ ವಿರುದ್ಧದ ವಿಚಾರಣೆಗೆ ತಡೆಯಾಜ್ಞೆ ನೀಡಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






