Air India ವಿಮಾನ ದುರಂತ: ಕೊನೆಗೂ ತನಿಖೆಗೆ ನಿರ್ಣಾಯಕವಾಗಿರುವ 2ನೇ ಬ್ಲಾಕ್ ಬಾಕ್ಸ್ ಪತ್ತೆ..!

ಜೂನ್ 16, 2025 - 10:47
 0  5
Air India ವಿಮಾನ ದುರಂತ: ಕೊನೆಗೂ ತನಿಖೆಗೆ ನಿರ್ಣಾಯಕವಾಗಿರುವ 2ನೇ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಗುಜರಾತ್ ಅಹಮದಾಬಾದ್ನಲ್ಲಿ ಏರ್ಇಂಡಿಯಾ ವಿಮಾನ ಪತನಗೊಂಡು 270ಕ್ಕೂ ಹೆಚ್ಚು ಮಂದಿ ತಮ್ಮ ಜೀವವನ್ನು ಕಳೆದುಕೊಂಡಿದ್ದಾರೆ. ಲಂಡನ್ಗೆ ಹೊರಟಿದ್ದ ಬೋಯಿಂಗ್ಡ್ರೀಮ್ಲೈನರ್ವಿಮಾನದಲ್ಲಿ 242 ಪ್ರಯಾಣಿಸುತ್ತಿದ್ದರು. ಇದೀಗ ಏರ್ಇಂಡಿಯಾ ವಿಮಾನ ದುರಂತಕ್ಕೆ ಸಂಬಂಧಿಸಿದಂತೆ ಕೆಲವು ಮಾಹಿತಿಗಳು ಲಭ್ಯವಾಗಿದೆ. ಇದೀಗ ವಿಮಾನದಲ್ಲಿದ್ದ ಎರಡನೇ ಬ್ಲ್ಯಾಕ್​​ಬಾಕ್ಸ್ಪತ್ತೆಯಾಗಿದೆ.

ಕಾಕ್ಪಿಟ್ ವಾಯ್ಸ್ ರೆಕಾರ್ಡರ್ ಭಾನುವಾರ ಪತ್ತೆಯಾಗಿದೆ. ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಹಿರಿಯ ಸಹಾಯಕ ಪಿ.ಕೆ. ಮಿಶ್ರಾ ಮಾಹಿತಿ ನೀಡಿದ್ದಾರೆ. ಎರಡನೇ ಬ್ಲ್ಯಾಕ್ಬಾಕ್ಸ್ನಿಂದ ಘಟನೆಯ ಪ್ರತಿ ಸೆಕೆಂಡ್ನಲ್ಲಿ ಏನಾಗಿತ್ತು ಎಂಬುದನ್ನು ಅರ್ಥಮಾಡಿಕೊಳ್ಳಬಹುದು. ಇದು ಕಾಕ್ಪಿಟ್ಮತ್ತು ವಿಮಾನ ವ್ಯವಸ್ಥೆಯಲ್ಲಿ ಏನಾಯ್ತು ಎಂಬುದರ ಕುರಿತು ವಸ್ತುನಿಷ್ಠ ಮಾಹಿತಿಯನ್ನು ನೀಡುತ್ತದೆ.

ಎರಡನೇ ಬ್ಲ್ಯಾಕ್ಬಾಕ್ಸ್ನಿಂದ ಘಟನೆಯ ಪ್ರತಿ ಸೆಕೆಂಡ್ನಲ್ಲಿ ಏನಾಗಿತ್ತು ಎಂಬುದನ್ನು ಅರ್ಥಮಾಡಿಕೊಳ್ಳಬಹುದು. ಇದು ಕಾಕ್ಪಿಟ್ಮತ್ತು ವಿಮಾನ ವ್ಯವಸ್ಥೆಯಲ್ಲಿ ಏನಾಯ್ತು ಎಂಬುದರ ಕುರಿತು ವಸ್ತುನಿಷ್ಠ ಮಾಹಿತಿಯನ್ನು ನೀಡುತ್ತದೆ. ಎಲ್ಲಾ ಕಾಕ್ಪಿಟ್ ಆಡಿಯೋ, ಪೈಲಟ್ ಸಂಭಾಷಣೆಗಳು, ರೇಡಿಯೋ ಪ್ರಸರಣಗಳು ಹಾಗೂ ಇತರೇ ಯಾಂತ್ರಿಕ ಶಬ್ಧಗಳ ಮಾಹಿತಿಯನ್ನು ಸಂಗ್ರಹಿಸಿರುತ್ತದೆ ಎಂದು ತಿಳಿಸಿರುವುದಾಗಿ ವರದಿಯಾಗಿದೆ. ವಿಶ್ವದ ಅತ್ಯಂತ ಸುರಕ್ಷಿತ ಪ್ರಯಾಣಿಕ ವಿಮಾನಗಳಲ್ಲಿ ಒಂದಾದ ಬೋಯಿಂಗ್ 787 ಡ್ರೀಮ್​​ಲೈನ್ರ್ ವಿಮಾನ ನೆಲಕ್ಕೆ ಅಪ್ಪಳಿಸಿತ್ತು.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow