Air India ವಿಮಾನ ಪತನ: ಮಾಜಿ ಸಿಎಂ ಸೇರಿ ವಿಮಾನದಲ್ಲಿದ್ದ ಎಲ್ಲ 242 ಪ್ರಯಾಣಿಕರ ಸಾವು..!

ಇಂದು ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ. ಘಟನೆ ಸಂಭವಿಸಿದ ಕೆಲವೇ ಹೊತ್ತಲ್ಲಿ ಅಧಿಕಾರಿಗಳು ಹಂಚಿಕೊಂಡ ಪ್ರಯಾಣಿಕರ ಪಟ್ಟಿಯಲ್ಲಿ ಕುಟುಂಬಗಳು, ಕೆಲವು ವಿದ್ಯಾರ್ಥಿಗಳು,
ಮಕ್ಕಳು ಮತ್ತು ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 240ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದದ್ದು ಬಹಿರಂಗಪಡಿಸಲಾಗಿದೆ. ಅದಲ್ಲದೆ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ವಿಮಾನದಲ್ಲಿದ್ದ ಎಲ್ಲಾ 242 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಎಪಿ ವರದಿ ಮಾಡಿದೆ.
ಅಪಘಾತದ ಸಮಯದಲ್ಲಿ ವಿಮಾನದಲ್ಲಿ 232 ಪ್ರಯಾಣಿಕರು ಮತ್ತು 10 ಸಿಬ್ಬಂದಿ ಇದ್ದರು. ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, ಏಳು ಪೋರ್ಚುಗೀಸರು ಮತ್ತು ಒಬ್ಬ ಕೆನಡಾದವರು ಇದ್ದರು. ಅಹಮದಾಬಾದ್ನ ಮೇಘನಿನಗರ ಪ್ರದೇಶದಲ್ಲಿರುವ ದರ್ಪುರದಲ್ಲಿ ವಿಮಾನ ಅಪಘಾತಕ್ಕೀಡಾಯಿತು. ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಅಪಘಾತದ ಕಾರಣವನ್ನು ಅಧಿಕಾರಿಗಳು ಇನ್ನೂ ಖಚಿತಪಡಿಸಿಲ್ಲ.
ನಿಮ್ಮ ಪ್ರತಿಕ್ರಿಯೆ ಏನು?






