Aman Jaiswal Dies: ಭೀಕರ ರಸ್ತೆ ಅಪಘಾತಕ್ಕೆ ಖ್ಯಾತ ನಟ ಬಲಿ!

ಮುಂಬೈ: ಭೀಕರ ರಸ್ತೆ ಅಪಘಾತಕ್ಕೆ ಖ್ಯಾತ ನಟ ಬಲಿಯಾಗಿರುವ ಘಟನೆ ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ನಡೆದಿದೆ. ನಟ ಅಮನ್ ಜೈಸ್ವಾಲ್ (23) ಸಾವನ್ನಪ್ಪಿದ ದುರ್ಧೈವಿಯಾಗಿದ್ದು, ನಟ ಅಮನ್ ’ಧರ್ತಿಪುತ್ರ ನಂದಿನಿ’ ಧಾರಾವಾಹಿಯಲ್ಲಿ ಪ್ರಮುಖ ಪಾತ್ರಕ್ಕೆ ಹೆಸರುವಾಸಿಯಾಗಿದ್ದರು.
ಅಪಘಾತದಲ್ಲಿ ಗಾಯಗೊಂಡಿದ್ದ ಜೈಸ್ವಾಲ್ ಅವರನ್ನು ಕಾಮಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಅಂಬೋಲಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಟ್ರಕ್ ಚಾಲಕನ ವಿರುದ್ಧ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಗಾಗಿ ಪ್ರಕರಣ ದಾಖಲಿಸಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






