Asia cup 2025 Final: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಟೀಮ್ ಇಂಡಿಯಾ!
ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಒಟ್ಟಾರೆಯಾಗಿ 22 ನೇ ಬಾರಿಗೆ ಮುಖಾಮುಖಿಯಾಗಲಿವೆ. ಈ ಹಿಂದೆ ನಡೆದ 21 ಮುಖಾಮುಖಿಗಳಲ್ಲಿ ಭಾರತ 12 ರಲ್ಲಿ ಗೆದ್ದಿದ್ದರೆ, ಪಾಕಿಸ್ತಾನ 6 ರಲ್ಲಿ ಗೆದ್ದಿದೆ. ಮೂರು ಪಂದ್ಯಗಳು ಡ್ರಾದಲ್ಲಿ ಕೊನೆಗೊಂಡಿವೆ.ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ಹೌದುದುಬೈ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯಾಕಪ್ನ ಫೈನಲ್ ಪಂದ್ಯದಲ್ಲಿ ಪಾಕ್ ವಿರುದ್ಧ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಟಾಸ್ ಗೆದ್ದು ಮೊದಲ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಸಲ್ಮಾನ್ ಅಲಿ ಆಘಾ ನೇತೃತ್ವದ ಪಾಕಿಸ್ತಾನ ತಂಡ ಮೊದಲ ಬ್ಯಾಟಿಂಗ್ ಮಾಡುವ ಅವಕಾಶ ಪಡೆದುಕೊಂಡಿದೆ.
ಈ ಟೂರ್ನಿಯಲ್ಲಿ ಎರಡೂ ತಂಡಗಳು ಮುಖಾಮುಖಿಯಾ ಗುತ್ತಿರುವುದು ಇದು ಮೂರನೇ ಬಾರಿ. ಈ ಮೊದಲು ಎರಡು ತಂಡಗಳು ಎರಡು ಬಾರಿ ಮುಖಾಮುಖಿಯಾಗಿದ್ದು, ಈ ಎರಡೂ ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿದೆ. ಈಗ ಮೂರನೇ ಬಾರಿಗೆ ಇದೇ ರೀತಿಯ ಪ್ರದರ್ಶನವನ್ನು ನಿರೀಕ್ಷಿಸಲಾಗಿದೆ. ಏಷ್ಯಾಕಪ್ ಟೂರ್ನಿಯ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ಫೈನಲ್‌ನಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿರುವುದು ಈ ಪಂದ್ಯಕ್ಕೆ ಮತ್ತಷ್ಟು ಮೆರಗು ತಂದಿದೆ.
ನಿಮ್ಮ ಪ್ರತಿಕ್ರಿಯೆ ಏನು?