Asia Cup 2025: ಏಷ್ಯಾ ಕಪ್‌ಗೆ ಟೀಮ್ ಇಂಡಿಯಾ ಸಂಭಾವ್ಯ ತಂಡ ಪ್ರಕಟ..! ಯಾರಿಗೆಲ್ಲಾ ಸ್ಥಾನ..?

ಆಗಸ್ಟ್ 7, 2025 - 09:19
 0  32
Asia Cup 2025: ಏಷ್ಯಾ ಕಪ್‌ಗೆ ಟೀಮ್ ಇಂಡಿಯಾ ಸಂಭಾವ್ಯ ತಂಡ ಪ್ರಕಟ..! ಯಾರಿಗೆಲ್ಲಾ ಸ್ಥಾನ..?

ಸೆಪ್ಟೆಂಬರ್ 9 ರಿಂದ ಆರಂಭವಾಗಲಿರುವ ಏಷ್ಯಾಕಪ್ ಟಿ20 ಕ್ರಿಕೆಟ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಹಿನ್ನೆಲೆಯಲ್ಲಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಗಸ್ಟ್ ಮೂರನೇ ವಾರದಲ್ಲಿ ಟೀಮ್ ಇಂಡಿಯಾ ತಂಡವನ್ನು ಪ್ರಕಟಿಸಲಿದೆ. ಬಾರಿ ಟೂರ್ನಿಗೆ ಯುವ ಆಟಗಾರರನ್ನು ಪ್ರೋತ್ಸಾಹಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೀಗಾಗಿ ಹಿರಿಯ ಆಟಗಾರರು ಟೂರ್ನಿಯಿಂದ ಹೊರಗುಳಿಯುವ ಸಾಧ್ಯತೆ ಇದೆ.

ಕಳೆದ ಫೆಬ್ರವರಿಯಲ್ಲಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದ ಶುಭ್ಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಮರಳಿ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಜೊತೆಗೆ ಅಭಿಷೇಕ್ ಶರ್ಮಾ ಕೂಡ ಆರಂಭಿಕ ಆಟಗಾರನಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.

ಸೂರ್ಯಕುಮಾರ್ ಯಾದವ್ ನಾಯಕನ ಸ್ಥಾನಕ್ಕೆ ಪಕ್ವ ಅಭ್ಯರ್ಥಿಯಾಗಿದ್ದು, ಮೂರನೇ ಕ್ರಮಾಂಕದಲ್ಲಿ ಶುಭ್ಮನ್ ಗಿಲ್ ಆಟವಾಡಲಿದ್ದಾರೆ. ವಿಕೆಟ್ ಕೀಪರ್ಆಗಿ ಸಂಜು ಸ್ಯಾಮ್ಸನ್ ಹಾಗೂ ರಿಷಭ್ ಪಂತ್ಗೆ ಅವಕಾಶ ನೀಡಲಾಗುವ ಸಾಧ್ಯತೆ ಇದೆ. ಆದರೆ ಪಂತ್ ಫಿಟ್ ಆಗದಿದ್ದರೆ, ಜಿತೇಶ್ ಶರ್ಮಾ ಅವರಿಗೆ ತಂಡದಲ್ಲಿ ಅವಕಾಶ ಸಿಗಬಹುದು.

ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ ಮತ್ತು ಶ್ರೇಯಸ್ ಅಯ್ಯರ್ ಸ್ಥಾನ ಪಡೆಯುವ ಸಾಧ್ಯತೆ ಇದೆ. ಆಲ್ರೌಂಡರ್ಗಳ ಪಟ್ಟಿಯಲ್ಲಿ ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್ ಮತ್ತು ಅಕ್ಷರ್ ಪಟೇಲ್ ಸ್ಥಾನ ಪಡೆದಿರುವುದಾಗಿ ವರದಿಯಾಗಿದೆ. ಸ್ಪಿನ್ ವಿಭಾಗದಲ್ಲಿ ವರುಣ್ ಚಕ್ರವರ್ತಿ ಆಯ್ಕೆಯಾಗುವ ಸಾಧ್ಯತೆ ಇದೆ.

ವೇಗದ ಬೌಲಿಂಗ್ ವಿಭಾಗದಲ್ಲಿ ಅರ್ಷದೀಪ್ ಸಿಂಗ್ ಮತ್ತು ಮೊಹಮ್ಮದ್ ಸಿರಾಜ್ ಸ್ಥಾನ ಪಡೆಯಲಿದ್ದಾರೆ. ಜಸ್ಪ್ರೀತ್ ಬುಮ್ರಾ ಫಿಟ್ನೆಸ್ ಸಮಸ್ಯೆಯಿಂದ ಹೊರಗುಳಿಯಲಿರುವ ಸಾಧ್ಯತೆ ಇದ್ದು, ಕಾರಣದಿಂದ ಹರ್ಷಿತ್ ರಾಣಾ ತಂಡದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು.ಬಿಸಿಸಿಐ ಇನ್ನೂ ಅಧಿಕೃತ ಘೋಷಣೆ ನೀಡಿಲ್ಲವಾದರೂ, ಯುವಕರಿಗೆ ಅವಕಾಶ ನೀಡುವ ಬಗ್ಗೆಯಿನ ಚರ್ಚೆಗಳು ಕ್ರಿಕೆಟ್ ವಲಯದಲ್ಲಿ ಚುರುಕಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow