Asia Cup 2025: ಏಷ್ಯಾಕಪ್ʼ​​ಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್​ಗೆ ಇಲ್ಲ ಚಾನ್ಸ್..!

ಆಗಸ್ಟ್ 19, 2025 - 16:00
 0  22
Asia Cup 2025: ಏಷ್ಯಾಕಪ್ʼ​​ಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್​ಗೆ ಇಲ್ಲ ಚಾನ್ಸ್..!

ಮುಂದಿನ ತಿಂಗಳು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಆತಿಥ್ಯ ವಹಿಸಲಿರುವ 17ನೇ ಆವೃತ್ತಿಯ ಏಷ್ಯಾಕಪ್‌ಗಾಗಿ ಇಂದು ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಉಪನಾಯಕನಾಗಿ ಶುಭ್ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ.

ಬಹುನಿರೀಕ್ಷಿತ ಏಷ್ಯಾಕಪ್‌ ಸೆಪ್ಟೆಂಬರ್ 9ರಂದು ಆರಂಭಗೊಂಡು, ಸೆ. 28ರಂದು ಫೈನಲ್‌ ಪಂದ್ಯದೊಂದಿಗೆ ಮುಕ್ತಾಯಗೊಳ್ಳಲಿದೆ. ಈ ಬಾರಿ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸುತ್ತಿದ್ದು, ಅವುಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ.

  • ಗ್ರೂಪ್ ಎ: ಭಾರತ, ಪಾಕಿಸ್ತಾನ, ಓಮನ್, ಯುನೈಟೆಡ್ ಅರಬ್ ಎಮಿರೇಟ್ಸ್
  • ಗ್ರೂಪ್ ಬಿ: ಶ್ರೀಲಂಕಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಹಾಂಗ್ ಕಾಂಗ್

ಸರಣಿಯ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ ಮತ್ತು ಹಾಂಗ್ ಕಾಂಗ್ ಸೆಣಸಲಿವೆ. ಭಾರತ ತನ್ನ ಮೊದಲ ಪಂದ್ಯವನ್ನು ಸೆಪ್ಟೆಂಬರ್ 10ರಂದು ಯುಎಇ ವಿರುದ್ಧ ಆಡಲಿದ್ದು, ಸೆ. 14ರಂದು ಪಾಕಿಸ್ತಾನ ವಿರುದ್ಧ ಸಾಂಪ್ರದಾಯಿಕ ಹೈವೋಲ್ಟೇಜ್‌ ಪೈಪೋಟಿ ಎದುರಿಸಲಿದೆ.

ಇನ್ನೂ ಹದಿನೈದು ಸದಸ್ಯರುಗಳ ಈ ತಂಡದಲ್ಲಿ ಕನ್ನಡಿಗ ಕೆಎಲ್ ರಾಹುಲ್​ಗೆ (KL Rahul) ಸ್ಥಾನ ಲಭಿಸಿಲ್ಲ.ಮುಂಬರುವ ಏಷ್ಯಾಕಪ್ ಟಿ20 ಸ್ವರೂಪದಲ್ಲಿ ನಡೆಯಲಿದ್ದು, ಹೀಗಾಗಿ ಯುವ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಇದೇ ಕಾರಣದಿಂದಾಗಿ ಕೆಎಲ್ ರಾಹುಲ್​ಗೆ ಸ್ಥಾನ ನೀಡಲಾಗಿಲ್ಲ ಎಂದು ತಿಳಿದು ಬಂದಿದೆ. ಬದಲಾಗಿ ವಿಕೆಟ್ ಕೀಪರ್​ಗಳಾಗಿ ಸಂಜು ಸ್ಯಾಮ್ಸನ್ ಹಾಗೂ ಜಿತೇಶ್ ಶರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ.

ಇತ್ತ ಕೆಎಲ್ ರಾಹುಲ್ ಭಾರತದ ಪರ ಟಿ20 ಪಂದ್ಯವಾಡಿ ವರ್ಷ ಕಳೆದಿದೆ. ಅದರಲ್ಲೂ 2024ರಲ್ಲಿ ನಡೆದ ಟಿ20 ವಿಶ್ವಕಪ್ ಗೆ ರಾಹುಲ್ ಅವರನ್ನು ಆಯ್ಕೆ ಮಾಡಿರಲಿಲ್ಲ. ಇನ್ನು ಈ ವರ್ಷದ ಆರಂಭದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲೂ ಕೆಎಲ್ಆರ್​​ಗೆ ಚಾನ್ಸ್ ನೀಡಿರಲಿಲ್ಲ.

ಏಷ್ಯಾ ಕಪ್​ಗೆ ಭಾರತ ತಂಡಸಂಜು ಸ್ಯಾಮ್ಸನ್ (ವಿಕೆಟ್ಕೀ ಪರ್), ಅಭಿಷೇಕ್ ಶರ್ಮಾತಿಲಕ್ ವರ್ಮಾಸೂರ್ಯಕುಮಾರ್ ಯಾದವ್ (ನಾಯಕ),  ಶುಭ್​ಮನ್ ಗಿಲ್ (ಉಪನಾಯಕ),  ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾಅರ್ಷದೀಪ್ ಸಿಂಗ್ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow