Asia Cup 2025: ಟೀಂ ಇಂಡಿಯಾ ಆಟಗಾರನಿಗೆ ಡೆಂಗ್ಯೂ! ದುಲೀಪ್ ಟ್ರೋಫಿಯಿಂದ ಔಟ್
2025ರ ಟಿ20 ಏಷ್ಯಾಕಪ್‌ಗಾಗಿ ಟೀಂ ಇಂಡಿಯಾ ಇಂದು ಯುಎಇಗೆ ತೆರಳಲಿದೆ. ಈ ಟೂರ್ನಿಗೆ ಒಟ್ಟು 20 ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ಅವರಲ್ಲಿ 15 ಮಂದಿ ಮುಖ್ಯ ತಂಡದಲ್ಲಿದ್ದು, ಉಳಿದ ಐವರು ಮೀಸಲು ಆಟಗಾರರಾಗಿ ತಂಡಕ್ಕೆ ಸೇರಿಕೊಂಡಿದ್ದಾರೆ. ಮೀಸಲು ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಧ್ರುವ್ ಜುರೆಲ್ ಡೆಂಗ್ಯೂ ಸೋಂಕಿಗೆ ಒಳಗಾಗಿದ್ದಾರೆ. ಈ ಕಾರಣದಿಂದ ಅವರು ಪ್ರಸ್ತುತ ನಡೆಯುತ್ತಿರುವ ದೇಶೀಯ ದುಲೀಪ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ತಂಡ ನಿರ್ವಾಹಕರು ಜುರೇಲ್ ಅವರ ಆರೋಗ್ಯದ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದುಲೀಪ್ ಟ್ರೋಫಿಯ ಸೆಮಿಫೈನಲ್ ಸುತ್ತು ಆರಂಭವಾಗಲಿದೆ. ಈ ಸುತ್ತಿನಲ್ಲಿ ದ್ರುವ್ ಜುರೇಲ್ ಕೇಂದ್ರ ವಲಯ ತಂಡವನ್ನು ನಾಯಕನಾಗಿ ಮುನ್ನಡೆಸಬೇಕಿತ್ತು. ಆದರೀಗ ಡೆಂಗ್ಯೂ ಇಂದ ಬಳಲುತ್ತಿರುವ ಜುರೇಲ್ ಸೆಮಿಫೈನಲ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ದುಲೀಪ್ ಟ್ರೋಫಿಯ ಸೆಮಿಫೈನಲ್‌ನಂತಹ ಪ್ರಮುಖ ಪಂದ್ಯದಲ್ಲಿ ಧ್ರುವ್ ಜುರೆಲ್ ಆಡದಿರುವುದು ಕೇಂದ್ರ ವಲಯ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ.
ವಾಸ್ತವವಾಗಿ ದುಲೀಪ್ ಟ್ರೋಫಿ ಕ್ವಾರ್ಟರ್-ಫೈನಲ್ ಪಂದ್ಯದಲ್ಲಿಯೂ ಧ್ರುವ್ ಜುರೆಲ್ ಆಡಿರಲಿಲ್ಲ. ಆ ಸಮಯದಲ್ಲಿ ಜುರೇಲ್ ತೊಡೆಸಂದು ಗಾಯದಿಂದ ಬಳಲುತ್ತಿದ್ದರು, ಇದರಿಂದಾಗಿ ಅವರು ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಡೆಂಗ್ಯೂ ಕಾಯಿಲೆಯಿಂದ ಬಳಲುತ್ತಿರುವ ಧ್ರುವ್ ಜುರೆಲ್ ಬದಲಿಗೆ ವಿದರ್ಭ ತಂಡದ ನಾಯಕ ಅಕ್ಷಯ್ ವಾಡ್ಕರ್ ಅವರನ್ನು ಕೇಂದ್ರ ವಲಯ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?