Asia Cup 2025: ಮೊದಲ ಬಾರಿಗೆ ಹೊಸ ತಂಡದ ವಿರುದ್ಧ ಕಣಕ್ಕಿಳಿಯಲಿದೆ ಟೀಮ್ ಇಂಡಿಯಾ!

ಆಗಸ್ಟ್ 25, 2025 - 08:43
 0  22
Asia Cup 2025: ಮೊದಲ ಬಾರಿಗೆ ಹೊಸ ತಂಡದ ವಿರುದ್ಧ ಕಣಕ್ಕಿಳಿಯಲಿದೆ ಟೀಮ್ ಇಂಡಿಯಾ!

ಏಷ್ಯಾಕಪ್ ಟಿ20 ಟೂರ್ನಿ ಸೆಪ್ಟೆಂಬರ್ 9 ರಿಂದ ಆರಂಭವಾಗಲಿದೆ. ಈ ಟೂರ್ನಿಯ ಮೊದಲ ಸುತ್ತಿನಲ್ಲಿ ಭಾರತವು ಪಾಕಿಸ್ತಾನ್, ಯುಎಇ ಮತ್ತು ಒಮಾನ್ ತಂಡಗಳನ್ನು ಎದುರಿಸಲಿದೆ. ಈ ಪಂದ್ಯಗಳಲ್ಲಿ ಜಯಗಳಿಸಿದರೆ ಟೀಮ್ ಇಂಡಿಯಾ ಸೂಪರ್-4 ಹಂತಕ್ಕೇರಲಿದೆ.

ಟೀಮ್ ಇಂಡಿಯಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪ್ರವೇಶಿಸಿ ಈಗಾಗಲೇ 93 ವರ್ಷಗಳಾಗಿವೆ. ಆದರೆ ಇದೇ ಮೊದಲ ಬಾರಿಗೆ ಏಷ್ಯಾದ ತಂಡವಾದ ಒಮಾನ್ ವಿರುದ್ಧ ಭಾರತ ಆಡುವುದಕ್ಕೆ ಸಜ್ಜಾಗಿದೆ. ಇದುವರೆಗೆ ಒಮಾನ್ ತಂಡವು ಭಾರತದ ವಿರುದ್ಧ ಕಣಕ್ಕಿಳಿದಿಲ್ಲ.

2014ರಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿರುವ ಒಮಾನ್ ತಂಡವು ಈ ಬಾರಿಯ ಏಷ್ಯಾಕಪ್‌ಗೆ ಅರ್ಹತೆ ಪಡೆದಿದೆ. ಸೆಪ್ಟೆಂಬರ್ 19ರಂದು ನಡೆಯುವ ಮೊದಲ ಸುತ್ತಿನ ಕೊನೆಯ ಪಂದ್ಯದಲ್ಲಿ ಭಾರತ–ಒಮಾನ್ ಮುಖಾಮುಖಿಯಾಗಲಿದ್ದು, ಇದು ಒಮಾನ್ ತಂಡಕ್ಕೆ ಸ್ಮರಣೀಯ ಕ್ಷಣವಾಗಲಿದೆ.

ಸೆಪ್ಟೆಂಬರ್ 10: ಭಾರತ ತಂಡವು ತನ್ನ ಮೊದಲ ಪಂದ್ಯದಲ್ಲಿ ಯುಎಇ ತಂಡವನ್ನು ಎದುರಿಸಲಿದೆ. ಸೆಪ್ಟೆಂಬರ್ 10 ರಂದು ದುಬೈನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ 2025 ರಲ್ಲಿ ಶುಭಾರಂಭ ಮಾಡಲಿದೆ.

ಸೆಪ್ಟೆಂಬರ್ 14: ಟೀಮ್ ಇಂಡಿಯಾದ ಎರಡನೇ ಎದುರಾಳಿ ಪಾಕಿಸ್ತಾನ್. ಇಂಡೋ-ಪಾಕ್ ನಡುವಣ ಈ ಹೈವೋಲ್ಟೇಜ್ ಪಂದ್ಯವು ಸೆಪ್ಟೆಂಬರ್ 14 ರಂದು ದುಬೈನ ಇಂಟರ್​​ನ್ಯಾಷನಲ್ ಸ್ಟೇಡಿಯಂನಲ್ಲಿ ಜರುಗಲಿದೆ.

ಸೆಪ್ಟೆಂಬರ್ 19: ಭಾರತ ತಂಡವು ತನ್ನ ಮೂರನೇ ಪಂದ್ಯವನ್ನು ಒಮಾನ್ ವಿರುದ್ಧ ಆಡಲಿದೆ. ಸೆಪ್ಟೆಂಬರ್ 19 ರಂದು ಅಬುಧಾಬಿಯಲ್ಲಿ ಜರುಗಲಿರುವ ಈ ಮ್ಯಾಚ್​ನಲ್ಲೂ ಟೀಮ್ ಇಂಡಿಯಾ ಗೆಲ್ಲುವ ನಿರೀಕ್ಷೆಯಿದೆ. ಈ ಮೂರು ಪಂದ್ಯಗಳಲ್ಲಿ ಭಾರತ ತಂಡವು 2 ಜಯ ಸಾಧಿಸಿದರೆ ಸೂಪರ್-4 ಹಂತಕ್ಕೇರಲಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow