Beer Rates: ರಾಜ್ಯ ಸರ್ಕಾರದಿಂದ ಬಿಯರ್ ಪ್ರಿಯರಿಗೆ ಬಿಗ್ ಶಾಕ್! ದರ ಏರಿಕೆ ದಿನಾಂಕ ಫಿಕ್ಸ್

ಜನವರಿ 10, 2025 - 14:06
 0  10
Beer Rates: ರಾಜ್ಯ ಸರ್ಕಾರದಿಂದ ಬಿಯರ್ ಪ್ರಿಯರಿಗೆ ಬಿಗ್ ಶಾಕ್! ದರ ಏರಿಕೆ ದಿನಾಂಕ ಫಿಕ್ಸ್

ಬೆಂಗಳೂರು: ರಾಜ್ಯ ಸರ್ಕಾರ ಮದ್ಯ ಪ್ರಿಯರಿಗೆ ಶಾಕಿಂಗ್ನ್ಯೂಸ್ಒಂದನ್ನು ನೀಡಿದ್ದು, ಬಿಯರ್ ದರವನ್ನು ಶೇ.10ರಷ್ಟು ಹೆಚ್ಚಿಸಲು ಮುಂದಾಗಿದೆ. ಹೌದು ಪ್ರೀಮಿಯಂ ಮದ್ಯದ ಬಾಟಲ್​ಗೆ ಕನಿಷ್ಠ 10 ರಿಂದ 50 ರೂ.ವರೆಗೆ ಹೆಚ್ಚಳವಾಗಲಿದೆ. ಪ್ರತಿ ಬಿಯರ್​ನಲ್ಲಿನ ಅಲ್ಕೋಹಾಲ್​ ಅಂಶದ ಮೇಲೆ ದರ ಏರಿಕೆಯಾಗಲಿದೆ.

ಈ ಪರಿಷ್ಕೃತ ದರ ಜನವರಿ 20 ರಿಂದ ಜಾರಿಗೆ ಬರಲಿದೆ. ಭಾರತೀಯ ನಿರ್ಮಿತ ಮದ್ಯದ (ಐಎಂಎಲ್​) ಮಾರಾಟವನ್ನು ರಾಜ್ಯದಲ್ಲಿ ಉತ್ತೇಜಿಸುವ ಸಲುವಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಐಎಂಎಲ್​​ ಮದ್ಯದ ಬೆಲೆ ಶೇ 25 ರಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.

ಬಿಯರ್​ ದರ ಪರಿಷ್ಕರಿಸಲು 2024ರ ಆಗಸ್ಟ್​ನಲ್ಲಿಯೇ ಕರಡು ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ನಾನಾ ಕಾರಣಗಳಿಂದ ದರ ಪರಿಷ್ಕರಣೆ ಕಡತಕ್ಕೆ ಮುಖ್ಯಮಂತ್ರಿಗಳು ಸಹಿ ಹಾಕಿರಲಿಲ್ಲ. ಈಗ, ಮುಖ್ಯಮಂತ್ರಿಗಳು ದರ ಏರಿಕೆಗೆ ಸಮ್ಮತಿಸಿರುವ ಹಿನ್ನೆಲೆಯಲ್ಲಿ ಸರ್ಕಾರ ಆದೇಶ ಹೊರಡಿಸಿದೆ.

ಪ್ರೀಮಿಯಂ ಬಿಯರ್​ ಬೆಲೆ ಏರಿಕೆಗೆ ಬ್ರೂವರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (BAI) ತಕರಾರು ವ್ಯಕ್ತಪಡಿಸಿದೆ. ದೇಶದಲ್ಲೇ ಕರ್ನಾಟಕದಲ್ಲಿ ಅತಿ ಹೆಚ್ಚಿನ ​ಬೆಲೆಗೆ ಬಿಯರ್ ಮಾರಾಟವಾಗುತ್ತಿದೆ. ಬೆಲೆ ಏರಿಕೆಯಿಂದ ಬಿಯರ್​ ಮಾರಾಟ ಕಡಿಮೆಯಾಗಿದೆ ಎಂದು ಹೇಳಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow