BEL Recruitment: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜೂನ್ 4, 2025 - 08:01
 0  11
BEL Recruitment: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

 

ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪ್ರಾಜೆಕ್ಟ್ ಎಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಬಿಇ ಅಥವಾ ಬಿ.ಟೆಕ್ ಪದವಿ ಹೊಂದಿರಬೇಕು. ಪದವಿಯು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯಸ್ಸನ್ನು 30 ವರ್ಷಗಳಿಗೆ ನಿಗದಿಪಡಿಸಲಾಗಿದೆ. ಆದಾಗ್ಯೂ, ಸರ್ಕಾರಿ ನಿಯಮಗಳ ಪ್ರಕಾರ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಮೊದಲು ಲಿಖಿತ ಪರೀಕ್ಷೆಯನ್ನು ನಡೆಸಿ, ಅದರಲ್ಲಿ ಯಶಸ್ವಿಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಇದಾದ ನಂತರ ಅಂತಿಮ ಆಯ್ಕೆಯನ್ನು ಅರ್ಹತೆಯ ಆಧಾರದ ಮೇಲೆ ಮಾಡಲಾಗುತ್ತದೆ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಅಧಿಕೃತ ಸೈಟ್ ಅನ್ನು ಉಲ್ಲೇಖಿಸಬಹುದು.

ಅರ್ಜಿ ಸಲ್ಲಿಕೆ ಮೇ 20ರಿಂದ ಆರಂಭವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜೂನ್ 04ರೊಳಗೆ ಅರ್ಜಿ ಸಲ್ಲಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ 45 ಸಾವಿರದಿಂದ 55 ಸಾವಿರದ ವೆರೆಗೆ ತಿಂಗಳ ಸಂಬಳ ಸಿಗಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಅಭ್ಯರ್ಥಿಗಳು ಮೊದಲು BEL ನ ಅಧಿಕೃತ ವೆಬ್‌ಸೈಟ್bel-india.in ಗೆ ಭೇಟಿ ನೀಡಬೇಕು.
  • ಈಗ ಅಭ್ಯರ್ಥಿಗಳು ಮುಖಪುಟದಲ್ಲಿ “ನೇಮಕಾತಿ” ವಿಭಾಗಕ್ಕೆ ಹೋಗಿ.
  • ಸಂಬಂಧಿತ ನೇಮಕಾತಿಯ ಲಿಂಕ್ ಅನ್ನು ತೆರೆಯಿರಿ ಮತ್ತು ಅಲ್ಲಿ ನೀಡಲಾದ ಸೂಚನೆಗಳನ್ನು ಓದಿ.
  • ಈಗ ಆನ್‌ಲೈನ್ ಅರ್ಜಿ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಅಗತ್ಯವಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  • ಇದರ ನಂತರ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕು.
  • ಈಗ ಅಭ್ಯರ್ಥಿಗಳು ಫಾರ್ಮ್ ಅನ್ನು ಸಲ್ಲಿಸಿ.
  • ಅಂತಿಮವಾಗಿ, ಅಭ್ಯರ್ಥಿಗಳು ಫಾರ್ಮ್‌ನ ಪ್ರಿಂಟ್​ ಕಾಪಿಯನ್ನು ತೆಗೆದಿಟ್ಟುಕೊಳ್ಳಿ.

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow