Bengaluru Power Cut: ಬೆಂಗಳೂರಿಗರೇ ಗಮನಿಸಿ.. ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಆಗಸ್ಟ್ 2, 2025 - 21:03
 0  14
Bengaluru Power Cut: ಬೆಂಗಳೂರಿಗರೇ ಗಮನಿಸಿ.. ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಬೆಂಗಳೂರು: ಸರ್ಜಾಪುರ ಮತ್ತು ಅತ್ತಿಬೆಲೆ 66 ಕೆವಿ ವ್ಯಾಪ್ತಿಯಲ್ಲಿ ಹೆಚ್ಟಿಎಲ್ಎಸ್ಕಂಡಕ್ಟರ್ಗಳ ತಂತಿ ಜೋಡಣೆ ಕಾರ್ಯಚರಣೆ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಆಗಸ್ಟ್ 3 ರಂದು ಬೆಳಿಗ್ಗೆ 6 ರಿಂದ ರಾತ್ರಿ 8 ರವರೆಗೆ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ. ಹಾಗಾದರೆ ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ ಎಂಬ ಮಾಹಿತಿ ಇಲ್ಲಿದೆ.

ಎಲ್ಲೆಲ್ಲಿ ವಿದ್ಯುತ್ಕಡಿತ?

66/11 ಕೆವಿ ಅತ್ತಿಬೆಲೆ ವ್ಯಾಪ್ತಿಯಲ್ಲಿಯಡವನಹಳ್ಳಿ, ಇಚ್ಚಂಗೂರು, ವಡ್ಡರಪಾಳ್ಯ, ಅತ್ತಿಬೆಲೆ ಕೈಗಾರಿಕಾ ಪ್ರದೇಶ, ಬಳಗಾರನಹಳ್ಳಿ, ಮಂಚನಹಳ್ಳಿ, ಅತ್ತಿಬೆಲೆ ಟೌನ್, ಮಾಯಸಂದ್ರ, ದಾಸನಾಪುರ, ಬಲ್ಲೂರು, ಕಂಬಳಿಪುರ, ಚಿಕ್ಕ ಕಾನಹಳ್ಳಿ, ಇಂಡ್ಲಬೆಲೆ ಮತ್ತು ಹಾರೋಹಳ್ಳಿ.

66/11 ಕೆವಿ ಆನೇಕಲ್ ವ್ಯಾಪ್ತಿಯಲ್ಲಿಆನೇಕಲ್ ಟೌನ್, ಕಾವಲಹೊಸಹಳ್ಳಿ, ಗೌರೇನಹಳ್ಳಿ, ಹಾಲ್ದೇನಹಳ್ಳಿ, ಹೊಂಪಲಘಟ್ಟ, ಚೂಡೇನಹಳ್ಳಿ, ಹೊನ್ನ ಕಳಸಾಪುರ, ಕರ್ಪೂರು, ಬ್ಯಾಗಡದೇನಹಳ್ಳಿ, ಕಾದ ಅಗ್ರಹಾರ, ಚಿಕ್ಕಹಾಗಡೆ, ದೊಡ್ಡಹಾಗಡೆ.

66/11 ಕೆವಿ ಸಮಂದೂರು ವ್ಯಾಪ್ತಿಯಲ್ಲಿಸಮಂದೂರು, ರಾಚಮನಹಳ್ಳಿ, ಗುಡ್ಡನಹಳ್ಳಿ, ಅರವಂಟಿಗೆ ಪುರ, ಪಿ.ಗೊಲ್ಲಹಳ್ಳಿ, ತೆಲಗಾರ ಹಳ್ಳಿ, ವನಕನಹಳ್ಳಿ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow