Bengaluru Stampede: ಸಂತೋಷದ ಕ್ಷಣ ದುರಂತವಾಯ್ತು: ಮೊದಲ ಬಾರಿಗೆ ವಿರಾಟ್ ಕೊಹ್ಲಿ ಭಾವುಕ ಪೋಸ್ಟ್
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 3 ತಿಂಗಳ ಹಿಂದೆ ಸಂಭವಿಸಿದ ದುರಂತದ ಘಟನೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ತಮ್ಮ ವಿಷಾದವನ್ನು ವ್ಯಕ್ತಪಡಿಸಿದ್ದಾರೆ. ಕೊಹ್ಲಿ ತಮ್ಮ ಸಾಮಾಜಿಕ ಜಾಲತಾಣ ಖಾತೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಜೂನ್ 4 ರಂದು ನಡೆದ ದುರಂತದಂತಹ ಘಟನೆಗಳನ್ನು ಎದುರಿಸಲು ಜೀವನದಲ್ಲಿ ಯಾವುದೇ ತಯಾರಿ ಇರುವುದಿಲ್ಲ.
ಕಪ್ ಗೆಲುವು ನಮ್ಮ ಫ್ರಾಂಚೈಸಿಯ ಇತಿಹಾಸದಲ್ಲಿ ಅತ್ಯಂತ ಸಂತೋಷದಾಯಕ ಕ್ಷಣವಾಗಿರಬೇಕಾಗಿತ್ತು.. ಆದರೆ ದುರಂತವಾಗಿ ಮಾರ್ಪಟ್ಟಿದೆ. ಸಂತ್ರಸ್ತ ಕುಟುಂಬ ಮತ್ತು ಗಾಯಗೊಂಡ ನಮ್ಮ ಅಭಿಮಾನಿಗಳಿಗಾಗಿ ದುಃಖ ವ್ಯಕ್ತಪಡಿಸುತ್ತೇನೆ ಮತ್ತು ಪ್ರಾರ್ಥಿಸುತ್ತಿದ್ದೇನೆ. ನಿಮ್ಮ ತುಂಬಲಾರದ ನಷ್ಟವು ಈಗ ನಮ್ಮ ತಂಡದ ಇತಿಹಾಸದ ಭಾಗವಾಗಿದೆ. ನಾವೆಲ್ಲಾ ಒಟ್ಟಾಗಿ ಕಾಳಜಿ, ಗೌರವ ಮತ್ತು ಜವಾಬ್ದಾರಿಯೊಂದಿಗೆ ಮುಂದುವರಿಯುತ್ತೇವೆ." ಎಂದು ಪೋಸ್ಟ್ ಮಾಡಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಜೂನ್4ರಂದು ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ರೆ, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಕೇಸ್ ಸಂಬಂಧ ಆರ್‌ಸಿಬಿ, ಕೆಎಸ್‌ಸಿಎ ಮತ್ತು ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಅಲ್ಲದೆ ರಾಜ್ಯ ಸರ್ಕಾರವೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತುಗೊಳಿಸಿತ್ತು.
ನಿಮ್ಮ ಪ್ರತಿಕ್ರಿಯೆ ಏನು?