Bengaluru Stampede: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್! ವಿಚಾರಣೆ ಮುಂದೂಡಿಕೆ

ಜೂನ್ 5, 2025 - 15:58
 0  5
Bengaluru Stampede: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್! ವಿಚಾರಣೆ ಮುಂದೂಡಿಕೆ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಆರ್​ಸಿಬಿ (RCB) ಐಪಿಎಲ್ ವಿಜಯೋತ್ಸವ ಆಚರಣೆ ಸಂದರ್ಭ ಸಂಭವಿಸಿದ ಕಾಲ್ತುಳಿತ ಹಾಗೂ 11 ಜನರ ಸಾವಿಗೆ ಸಂಬಂಧಿಸಿದ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದ್ದು, ಈ ಅದರ ವಿಚಾರಣೆ ನಡೆಸಿದ ಹೈಕೋರ್ಟ್ ಸರ್ಕಾರಕ್ಕೆ ನೋಟೀಸ್ ನೀಡಿದೆ. ಮಾತ್ರವಲ್ಲ ಮುಂದಿನ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿದೆ.

ಮುಂದಿನ ಮಂಗಳವಾರದ ಒಳಗಾಗಿ ಪ್ರಕರಣ ಸಂಬಂಧಿಸಿದಂತೆ ವಸ್ತುಸ್ಥಿತಿ ವರದಿ ಸಲ್ಲಿಸಬೇಕು. ವರದಿಯನ್ನು ಆಧರಿಸಿ ಮುಂದಿನ ಆದೇಶಗಳನ್ನು ನೀಡಲಾಗುವುದು ಎಂದು ತಿಳಿಸಿ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.

 ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಅನಿರೀಕ್ಷಿ ಘಟನೆ ನಡೆದಿದ್ದು, 11 ಮಂದಿ ಸಾವನ್ನಪ್ಪಿ, 56 ಮಂದಿ ಗಾಯಗೊಂಡಿದ್ದಾರೆ ಎಂಬುದಾಗಿ ಮಾಧ್ಯಮಗಳು ವರದಿ ಮಾಡಿವೆ. ಈ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಲು ಹಲವು ಮಂದಿ ಮೇಲ್ ಮೂಲಕ ಮನವಿ ಮಾಡಿದ್ದಾರೆ. ಘಟನೆ ಗಂಭೀರವಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೀಠ ತಿಳಿಸಿದೆ.

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow