Bengaluru: ಬುರ್ಖಾ ವೇಷ ತೊಟ್ಟು ಲೇಡಿಸ್ ಹಾಸ್ಟೆಲ್ʼಗೆ ನುಗ್ಗಿದ ಯುವಕ..! ಮುಂದೇನಾಯ್ತು..?

ಮಾರ್ಚ್ 21, 2025 - 11:59
 0  9
Bengaluru: ಬುರ್ಖಾ ವೇಷ ತೊಟ್ಟು ಲೇಡಿಸ್ ಹಾಸ್ಟೆಲ್ʼಗೆ ನುಗ್ಗಿದ ಯುವಕ..! ಮುಂದೇನಾಯ್ತು..?

ಬೆಂಗಳೂರು: ಈ ಕೆಲವು ಪೋಲಿ ಹುಡುಗರು ಏನಾದರೊಂದು ತರ್ಲೆ ಕೆಲಸ ಮಾಡಿ ನೆಟ್ಟಿಗರ ಕೋಪಕ್ಕೆ ಗುರಿಯಾಗುತ್ತಿರುತ್ತಾರೆ. ಹೀಗೆ ಈ ಪೋಲಿ ಹುಡುಗರು ಹಾದಿ ಬೀದಿಯಲ್ಲಿ ಹೋಗುವವರಿಗೆ ತೊಂದರೆ ಕೊಡುವಂತಹ, ಮಧ್ಯರಾತ್ರಿ ಬಾಲಕಿಯರ ಹಾಸ್ಟೆಲ್​​ಗೆ ನುಗ್ಗಿದಂತಹ ಸುದ್ದಿಗಳನ್ನು ಕೇಳಿರುತ್ತೀರಿ ಅಲ್ವಾ. ಇದೀಗ ಅಂತಹದೊಂದು ಸುದ್ದಿ ವೈರಲ್ ಆಗಿದ್ದು, ಯುವಕನೊಬ್ಬ ಸ್ನೇಹಿತೆಯನ್ನು ಭೇಟಿಯಾಗಲು ಬುರ್ಖಾ ಧರಿಸಿ ಹುಡುಗಿಯರ ಹಾಸ್ಟೆಲ್‌ಗೆ ನುಗ್ಗಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಕಾಲೇಜು ಆವರಣದಲ್ಲಿ ನಡೆದಿದೆ.

ಜ್ಞಾನಭಾರತಿ ಕಾಲೇಜಿನ ರಮಾಬಾಯಿ ಹಾಸ್ಟೆಲ್‌ಗೆ ನಿನ್ನೆ ರಾತ್ರಿ 7 ಗಂಟೆ ಸುಮಾರಿಗೆ ಯುವಕ ಬುರ್ಖಾ ಧರಿಸಿ ಪ್ರವೇಶಿಸಿದ್ದ. ಬುರ್ಖಾ ಧರಿಸಿದ ಯುವಕನನ್ನ ಮಾಲೂರು ಮೂಲದವನು ಎನ್ನಲಾಗಿದೆ. ಯುವಕನ್ನು ಕಂಡ ವಿದ್ಯಾರ್ಥಿನಿಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಜ್ಞಾನಭಾರತಿ ಠಾಣೆಯ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದರು.

ವಿದ್ಯಾರ್ಥಿನಿಯರಿರುವ ಹಾಸ್ಟೆಲ್‌ಗೆ ನುಗ್ಗಿರುವ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದಾಗ ಸ್ನೇಹಿತೆಯಿಂದಲೇ ಬಟ್ಟೆ ತೆಗೆದುಕೊಂಡು ಹಾಸ್ಟೆಲ್‌ಗೆ ನುಗ್ಗಿದ್ದ ಯುವಕನಿಗೆ ಉಳಿದುಕೊಳ್ಳಲು ಸ್ಥಳವಿಲ್ಲದ ಕಾರಣ ಆಕೆಯೇ ಹಾಸ್ಟೆಲ್‌ನಲ್ಲಿ ವ್ಯವಸ್ಥೆ ಮಾಡಿರುವುದು ತಿಳಿದುಬಂದಿದೆ. ಮುಂಜಾಗ್ರತ ಕ್ರಮವಾಗಿ ಹುಡುಗಿಯರ ಹಾಸ್ಟೆಲ್‌ಗೆ ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow