BIG NEWS: ಸೋಷಿಯಲ್ ಮೀಡಿಯಾ ಬಳಕೆದಾರರಿಗೆ ಪೊಲೀಸ್ ಇಲಾಖೆ ಖಡಕ್ ಎಚ್ಚರಿಕೆ!

ಸೆಪ್ಟೆಂಬರ್ 1, 2025 - 21:29
 0  16
BIG NEWS: ಸೋಷಿಯಲ್ ಮೀಡಿಯಾ ಬಳಕೆದಾರರಿಗೆ ಪೊಲೀಸ್ ಇಲಾಖೆ ಖಡಕ್ ಎಚ್ಚರಿಕೆ!

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಮನಬಂದಂತೆ ಪೋಸ್ಟ್ ಮತ್ತು ಕಾಮೆಂಟ್ ಮಾಡುವುದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವಂತಹ ವಿಷಯಗಳನ್ನು ಹಂಚುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಕಠಿಣ ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಿಂದ ಪ್ರಕಟಣೆ ಹೊರಡಿಸಿರುವ ಪೊಲೀಸರು, ಯಾವುದೇ ವ್ಯಕ್ತಿ, ಸಂಘಟನೆ ಅಥವಾ ಸಂಸ್ಥೆಯ ವಿರುದ್ಧ ಅವಹೇಳನಕಾರಿ ಅಥವಾ ಪ್ರಚೋದನಕಾರಿ ಪೋಸ್ಟ್/ಕಾಮೆಂಟ್ ಮಾಡುವುದು ಕಾನೂನು ಕ್ರಮಕ್ಕೆ ಕಾರಣವಾಗುತ್ತದೆ ಎಂದು ತಿಳಿಸಿದರು.

ಅದೇ ರೀತಿ, ಇಂತಹ ಘಟನೆಗಳು ಪುನರಾವರ್ತನೆಯಾದರೆ ಇನ್ನಷ್ಟು ಗಂಭೀರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಜಾಗರೂಕರಾಗಿರಿ. ಕರ್ನಾಟಕ ರಾಜ್ಯ ಪೊಲೀಸ್ ಸದಾ ಸಾರ್ವಜನಿಕರ ಸೇವೆಯಲ್ಲಿದೆ" ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow