BIGBOSS 12: ರಿಯಾಲಿಟಿ ಶೋ ‘ಬಿಗ್ ಬಾಸ್’ ಬಂದ್: ಜಾಲಿವುಡ್ ಡೇಸ್ ಸ್ಟುಡಿಯೋಗೆ ಬೀಗ

ಅಕ್ಟೋಬರ್ 7, 2025 - 18:14
 0  9
BIGBOSS 12: ರಿಯಾಲಿಟಿ ಶೋ ‘ಬಿಗ್ ಬಾಸ್’ ಬಂದ್: ಜಾಲಿವುಡ್ ಡೇಸ್ ಸ್ಟುಡಿಯೋಗೆ ಬೀಗ

ಕೆಲವೇ ದಿನಗಳ ಹಿಂದೆ ಆರಂಭವಾದ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋ ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದೇ ಶೋ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಸದ್ಯ ನಿಯಮ ಉಲ್ಲಂಘನೆ ಆರೋಪದ ಮೇಲೆ ಬಿಗ್ ಬಾಸ್‌ ಸೆಟ್‌ಗೆ ಬೀಗ ಹಾಕಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿಯಲ್ಲಿ ನಿರ್ಮಿಸಲಾಗಿದ್ದ ಜಾಲಿವುಡ್ ಸ್ಟುಡಿಯೋಸ್‌ನ ಕಟ್ಟಡಕ್ಕೆ ಬೀಗ ಹಾಕಲಾಗಿದೆ.

ಹೌದು ರಾಮನಗರ ತಹಶೀಲ್ದಾರ್ ತೇಜಸ್ವಿನಿ ನೇತೃತ್ವದಲ್ಲಿ ಅಧಿಕಾರಿಗಳು ಮತ್ತು ಪೊಲೀಸರ ತಂಡ ಸ್ಥಳಕ್ಕೆ ತೆರಳಿ ಕ್ರಮ ಕೈಗೊಂಡಿದ್ದಾರೆ. ಪರಿಸರ ನಿಯಮ ಉಲ್ಲಂಘನೆ ಆರೋಪದಡಿಯಲ್ಲಿ ಬೀಗ ಜಡಲಾಗಿದೆ. ಈ ಹಿನ್ನೆಲೆಯಲ್ಲಿ ಶೋ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಕಿಚ್ಚ ಸುದೀಪ್ ನಡೆಸಿಕೊಡುವ ಬಿಗ್ ಬಾಸ್ ಶೋ ಇದೇ ಸ್ಟುಡಿಯೋದಲ್ಲಿ ನಡೆಯಿತ್ತಿತ್ತು.17 ಮಂದಿ ಸ್ಪರ್ಧಿಗಳು ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ನೂರಾರು ತಂತ್ರಜ್ಞರು ಈ ರಿಯಾಲಿಟಿ ಶೋಗಾಗಿ ಕೆಲಸ ಮಾಡುತ್ತಿದ್ದಾರೆ. ಜಾಲಿವುಡ್ ಸ್ಟುಡಿಯೋದಿಂದ ಸರಿಯಾದ ರೀತಿಯಲ್ಲಿ ತಾಜ್ಯ ಸಂಸ್ಕರಣೆ ಮತ್ತು ವಿಲೇವಾರಿ ಆಗಿಲ್ಲ ಎಂಬ ಆರೋಪ ಇದೆ. ಆದ್ದರಿಂದ ಬೀಗ ಜಡಿಯಲಾಗಿದ್ದು, ಸ್ಟುಡಿಯೋವನ್ನು ಸೀಲ್ ಮಾಡಿರೋದ್ರಿಂದ ಬಿಗ್ ಬಾಸ್ ಶೋಗೆ ಬಿಗ್ ಶಾಕ್ ಎದುರಾದಂತಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow