BJP-JDS ನಡುವಿನ ಬಾಂಧವ್ಯಕ್ಕೆ ಯಾರೂ ಹುಳಿ ಹಿಂಡಲು ಸಾಧ್ಯವೇ ಇಲ್ಲ: ಆರ್.ಅಶೋಕ್

ಎಪ್ರಿಲ್ 11, 2025 - 13:59
 0  12
BJP-JDS ನಡುವಿನ ಬಾಂಧವ್ಯಕ್ಕೆ ಯಾರೂ ಹುಳಿ ಹಿಂಡಲು ಸಾಧ್ಯವೇ ಇಲ್ಲ: ಆರ್.ಅಶೋಕ್

ಬೆಂಗಳೂರು: BJP-JDS ನಡುವಿನ ಬಾಂಧವ್ಯಕ್ಕೆ ಯಾರೂ ಹುಳಿ ಹಿಂಡಲು ಸಾಧ್ಯವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜೆಡಿಎಸ್‌ನ ಹೋರಾಟಕ್ಕೆ ಬಿಜೆಪಿಯ ಸಂಪೂರ್ಣ ಬೆಂಬಲವಿದೆ.

ಯಾವ ಹೋರಾಟ ಒಟ್ಟಿಗೆ ಮಾಡಬೇಕು, ಪ್ರತ್ಯೇಕ ಮಾಡಬೇಕೆಂದು ಹೆಚ್.ಡಿ.ಕುಮಾರಸ್ವಾಮಿ ಜೊತೆ ಚರ್ಚಿಸಲಾಗುವುದು. ನಮ್ಮ ಅವರ ನಡುವಿನ ಬಾಂಧವ್ಯಕ್ಕೆ ಯಾರೂ ಹುಳಿ ಹಿಂಡಲು ಸಾಧ್ಯವೇ ಇಲ್ಲ ಎಂದರು. ಇನ್ನೂ ಭ್ರಷ್ಟಾಚಾರವೇ ನಮ್ಮ ಬಂಧು ಬಳಗ ಎಂದು ಕಾಂಗ್ರೆಸ್ ಘೋಷಣೆ ಮಾಡಿಕೊಳ್ಳಬೇಕು.

ಸಿಎಂ ರಾಜೀನಾಮೆ ನೀಡದೇ ಇರಲು ಕಮಿಷನ್ ವಸೂಲಿ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್  ಸಿಎಂ ಆಗಲು ಕಮಿಷನ್ ಸಂಗ್ರಹಿಸುತ್ತಿದ್ದಾರೆ. ಸಚಿವರು ಕೂಡ ಸಿಎಂ ಆಗಲು ಕಮಿಷನ್ ಮಾಡುತ್ತಿದ್ದಾರೆ. ವಿಧಾನಸೌಧದ ಸಚಿವರ ಕಚೇರಿಗಳು ಕಲೆಕ್ಷನ್ ಸೆಂಟರ್ ಆಗಿದೆ. ಜೊತೆಗೆ ಜನರ ಮೇಲೆ 80 ಸಾವಿರ ಕೋಟಿ ರೂ. ತೆರಿಗೆ ಹಾಕಿದ್ದಾರೆ ಎಂದು ದೂರಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow