BJP MLA ಮುನಿರತ್ನಗೆ ತಪ್ಪದ ಸಂಕಷ್ಟ: ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ರೇಪ್ ಕೇಸ್ ದಾಖಲು!

ಸೆಪ್ಟೆಂಬರ್ 19, 2024 - 10:38
 0  10
BJP MLA ಮುನಿರತ್ನಗೆ ತಪ್ಪದ ಸಂಕಷ್ಟ: ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ರೇಪ್ ಕೇಸ್ ದಾಖಲು!

ಬೆಂಗಳೂರು:- R.R​.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪದಡಿ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಈ ಮೂಲಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ. 

ಡಿವೈಎಸ್‌ಪಿ ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಹಾಜರಾಗಿ ಸಂತ್ರಸ್ತೆ 2 ಗಂಟೆಗೂ ಹೆಚ್ಚು ಕಾಲ ವಿವರಣೆ ನೀಡಿದ್ದಾರೆ. ಇಂದು ಸಂತ್ರಸ್ತೆ ಜೊತೆ ಪೊಲೀಸರು ಸ್ಥಳಮಹಜರು ನಡೆಸಲಿದ್ದಾರೆ. ಘಟನೆ ಸಂಬಂಧ ಶಾಸಕ ಮುನಿರತ್ನ ಸೇರಿ 7 ಜನರ ವಿರುದ್ಧ FIR ದಾಖಲಾಗಿದೆ. ಆರ್​.ಆರ್​.ನಗರ ಬಿಜೆಪಿ ಶಾಸಕ ಮುನಿರತ್ನ, ವಿಜಯ್​ ಕುಮಾರ್​, ಕಿರಣ್​​, ಲೋಹಿತ್​​, ಮಂಜುನಾಥ್​, ಲೋಕಿ ವಿರುದ್ಧ ಎಫ್ಐಆರ್ ದಾಖಲಾಗಿದೆ. 

ಆರ್​.ಆರ್​.ನಗರ ಬಿಜೆಪಿ ಶಾಸಕ ಮುನಿರತ್ನ, ವಿಜಯ್​ ಕುಮಾರ್​, ಕಿರಣ್​​, ಲೋಹಿತ್​​, ಮಂಜುನಾಥ್​, ಲೋಕಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಖಾಸಗಿ ರೆಸಾರ್ಟ್​ನಲ್ಲಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು DySP ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಮಹಿಳೆ ಆರೋಪ ಮಾಡಿ ಹೇಳಿಕೆ ನೀಡಿದ್ದಾರೆ. 354 a, 354 c, 376(2), 308, 406, 384, 120b 504, 506, 149 IPC ಸೆಕ್ಷನ್ ಅಡಿ ಕೇಸ್ ದಾಖಲಾಗಿದೆ.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow