BJP ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ! ಕಾರಣ ನಿಗೂಢ

ಜನವರಿ 10, 2025 - 16:01
 0  14
BJP ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ! ಕಾರಣ ನಿಗೂಢ

ಗದಗ: ಯುವ ಗುತ್ತಿಗೆದಾರ ಸಚಿನ್ ಸಚಿವ ಪ್ರಿಯಾಂಕ್ ಖರ್ಗೆ ಆಪ್ತರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಈ ಪ್ರಕರಣವನ್ನು ಅಸ್ತ್ರವನ್ನಾಗಿ ಮಾಡಿಕಂಡಿರುವ ಬಿಜೆಪಿ ಪ್ರಿಯಾಂಕ್ ಖರ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ನೇಣು ಬಿಗಿದುಕೊಂಡು ಆತ್ನಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡ್ ಕಾಲೋನಿಯಲ್ಲಿ ಜರುಗಿದೆ.

ಶಾಸಕ ಚಂದ್ರು ಇತ್ತೀಚೆಗೆ ಖರೀದಿಸಿ ನಿವಾಸದಲ್ಲಿ ಸುನಿಲ್‌ ಲಮಾಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಸುನಿಲ್‌ ಅವರು ಶಾಸಕ ಚಂದ್ರು ಅವರ ಸಂಬಂಧಿಯೂ ಆಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಯಾವುದೇ ಡೆತ್‌ನೋಟ್‌ ಸಿಕ್ಕಿಲ್ಲ. ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಲಕ್ಷ್ಮೇಶ್ವರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow