BMTC Bus Accident: ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: 9 ವರ್ಷದ ಬಾಲಕಿ ಮೇಲೆ ಹರಿದ ಬಸ್!
ಬೆಂಗಳೂರು: ನಗರದಲ್ಲಿ ಬಿಎಂಟಿಸಿ (ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ) ಬಸ್ ಮತ್ತೊಂದು ಜೀವ ಬಲಿ ಪಡೆದುಕೊಂಡಿದೆ. ಬಿಎಂಟಿಸಿ ಬಸ್ ಹರಿದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ನಗರದ ಪಾಂಚಜನ್ಯ ಸ್ಕೂಲ್ನ ವಿದ್ಯಾರ್ಥಿನಿ ಭುವನ (9) ಮೃತಪಟ್ಟ ಬಾಲಕಿ.
ರಾಜಾಜಿನಗರ 1 ಫಸ್ಟ್ ಬ್ಲಾಕ್ನಲ್ಲಿ ಈ ಅಪಘಾತ ಸಂಭವಿಸಿದೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಬಾಲಕಿ ಭುವನಾ ಟ್ಯೂಷನ್ ಮುಗಿಸಿ ಸ್ನೇಹಿತರ ಜೊತೆ ನಡೆದುಕೊಂಡು ಬರುತ್ತಿದ್ದಳು. ಈ ವೇಳೆ ರಭಸವಾಗಿ ಬಂದ ಬಸ್ ಬಾಲಕಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗ್ತಿದೆ.
ರಾಜಾಜಿನಗರ ಪಾಂಚಜನ್ಯ ವಿದ್ಯಾಪೀಠ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗ್ತಿದೆ. ಈಕೆಯ ಪೋಷಕರು ಬೆಂಗಳೂರಲ್ಲಿ ಜೋಳ ಮಾರಿಕೊಂಡು ಜೀವನ ಸಾಗಿಸುತ್ತಿದ್ದರು ಎನ್ನಲಾಗ್ತಿದೆ. ಮಹಾಲಕ್ಷ್ಮಿ ಲೇಔಟ್ ಬೋವಿ ಪಾಳ್ಯದಲ್ಲಿ ವಾಸಿಸುತ್ತಿದ್ದರು. ಸದ್ಯ ಎಮ್ ಎಸ್ ರಾಮಯ್ಯ ಆಸ್ಪತ್ರೆ ಶವಗಾರಕ್ಕೆ ಮೃತದೇಹ ರವಾನೆ ಮಾಡಲಾಗಿದೆ.BMTC ಚಾಲಕನ ಅಜಾಗರೂಕತೆಯಿಂದ ಇವರ ಮಗು ಬಲಿಯಾಗಿದೆ. ಸದ್ಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ನಿಮ್ಮ ಪ್ರತಿಕ್ರಿಯೆ ಏನು?