Bomb Threat: ಬೆಂಗಳೂರಿನ 40ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ! ಹೈ ಅಲರ್ಟ್

ಜುಲೈ 18, 2025 - 11:06
 0  11
Bomb Threat: ಬೆಂಗಳೂರಿನ 40ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ! ಹೈ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಹುಸಿ ಬಾಂಬ್ ಬೆದರಿಕೆ ಪ್ರಕರಣಗಳು ಮರುಕಳಿಸುತ್ತಿರುವ ನಡುವೆ, ಇದೀಗ ಬೆಂಗಳೂರಿನ 40ಕ್ಕೂ ಹೆಚ್ಚು ಶಾಲೆಗಳಿಗೆ -ಮೇಲ್ ಮೂಲಕ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಸಂದೇಶ ಬಂದಿರುವುದು ಆತಂಕವನ್ನುಂಟುಮಾಡಿದೆ.

 roadkill333@atomicmail.io ಎಂಬ -ಮೇಲ್ ವಿಳಾಸದಿಂದ ಬೆದರಿಕೆ ಸಂದೇಶ ಬಂದಿದ್ದು, ತಕ್ಷಣವೇ ಶಾಲಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸ್ ಇಲಾಖೆ ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿ, ಶಾಲೆ ಖಾಲಿ ಮಾಡಿಸಿ ಮಕ್ಕಳನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಬೆದರಿಕೆ -ಮೇಲ್ನಲ್ಲಿ, “ನಾನು ಶಾಲಾ ತರಗತಿಗಳಲ್ಲಿ ಹಲವು ಸ್ಫೋಟಕ ವಸ್ತುಗಳನ್ನು ಇಟ್ಟಿದ್ದೇನೆ. ಬ್ಲಾಕ್ ಪ್ಲಾಸ್ಟಿಕ್ ಚೀಲಗಳಲ್ಲಿ ಮುಚ್ಚಲಾಗಿದೆ. ನಿಮ್ಮೆಲ್ಲರನ್ನೂ ಲೋಕದಿಂದ ಅಳಿಸಿಹಾಕುತ್ತೇನೆ, ಯಾರೂ ಬದುಕುಳಿಯುವುದಿಲ್ಲಎಂಬ ಉಲ್ಲೇಖಗಳೊಂದಿಗೆ, ಕಿಡಿಗೇಡಿ ತನ್ನ ಆಕ್ರೋಶವನ್ನು ವ್ಯಕ್ತಪಡಿಸಿದ್ದಾನೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಸೈಬರ್ ಕ್ರೈಂ ವಿಭಾಗದ ಸಹಾಯದಿಂದ -ಮೇಲ್ ಕಳುಹಿಸಿದ ವ್ಯಕ್ತಿಯ ಗುರುತು ಪತ್ತೆ ಹಚ್ಚುವ ತನಿಖೆ ಆರಂಭಿಸಿದ್ದಾರೆ. ಶಾಲಾ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಕೆಲವು ಶಾಲೆಗಳಿಗೆ ತಾತ್ಕಾಲಿಕ ರಜೆ ನೀಡಲಾಗಿದೆ. ಬೆದರಿಕೆಯಿಂದಾಗಿ ಪೋಷಕರಲ್ಲಿ ಆತಂಕ ಮನೆಮಾಡಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow