Breaking: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ..!

ಬೆಂಗಳೂರು: ವಿಜಯೇಂದ್ರ ಹಾಗೂ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದ ಯತ್ನಾಳ್ಗೆ ಹೈಕಮಾಂಡ್ ಶಾಕ್ ಕೊಟ್ಟಿದ್ದು, ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ಇತ್ತೀಚೆಗೆಷ್ಟೇ ಮತ್ತೊಂದು ಶೋಕಾಸ್ ನೀಡಲಾಗಿತ್ತು. ಆದದರೂ ಸಹ ಅವರು ತಮ್ಮ ಮಾತಿನ ಸಮರ ಮುಂದುವರಿಸಿದ್ದರು. ಹೀಗಾಗಿ ಅಂತಿಮವಾಗಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದೆ.
ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದೆ ಮತ್ತು ಹಿಂದಿನ ಶೋಕಾಸ್ ನೋಟಿಸ್ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆ ಮತ್ತು ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ ಸಹ, ನೀವು ಪಕ್ಷದ ಶಿಸ್ತಿನ ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದೆ.
ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ. ಹಾಗೇ ನೀವು ಇಲ್ಲಿಯವರೆಗೆ ಹೊಂದಿದ್ದ ಯಾವುದೇ ಪಕ್ಷದ ಹುದ್ದೆಯಿಂದ ನಿಮ್ಮನ್ನು ತೆಗೆದುಹಾಕಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ಅವರು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






