BREAKING: ರಾಜ್ಯ ಸರ್ಕಾರಕ್ಕೆ ಹಿನ್ನೆಡೆ : "RSS" ಪಥಸಂಚಲನ ನಿರ್ಬಂಧಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಅಕ್ಟೋಬರ್ 28, 2025 - 14:03
 0  9
BREAKING: ರಾಜ್ಯ ಸರ್ಕಾರಕ್ಕೆ ಹಿನ್ನೆಡೆ : "RSS" ಪಥಸಂಚಲನ ನಿರ್ಬಂಧಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಬಿಜೆಪಿ ನಡುವೆ RSS ಪಥಸಂಚಲನ ಮತ್ತು ಚಟುವಟಿಕೆಗಳ ಕುರಿತು ವಾದ, ವಿವಾದ ನಡೆಯುತ್ತಿದ್ದು, ಇದೀಗ ತಾರ್ಕಿಕ ಅಂತ್ಯದ ಲಕ್ಷಣಗಳು ಕಾಣಿಸುತ್ತಿವೆ. ಹೌದು ರಾಜ್ಯ ಸರ್ಕಾರವು ಸಾರ್ವಜನಿಕ ಸ್ಥಳಗಳು ಮತ್ತು ಸರ್ಕಾರಿ ಜಾಗಗಳಲ್ಲಿ RSS ಚಟುವಟಿಕೆ ಮತ್ತು ಪಥಸಂಚಲನವನ್ನು ನಿರ್ಬಂಧಿಸುವ ಆದೇಶ ಹೊರಡಿಸಿತ್ತು.

ಸರ್ಕಾರದ ಆದೇಶದ ಪ್ರಕಾರ, 10 ಜನಕ್ಕಿಂತ ಹೆಚ್ಚು ಜನ ಸೇರ್ಪಡೆಯಾದರೆ ಅಕ್ರಮ ಕೂಟವೆಂದು ಪರಿಗಣಿಸಲಾಗುತ್ತಿತ್ತು. ಈ ಆದೇಶಕ್ಕೆ ವಿರುದ್ಧವಾಗಿ RSS ಸಂಸ್ಥೆ ಧಾರವಾಡ ಹೈಕೋರ್ಟ್ ಪೀಠದಲ್ಲಿ ರಿಟ್ ಅರ್ಜಿ ಸಲ್ಲಿಸಿತ್ತು. ಸದ್ಯ ಪಥಸಂಚಲನ ನಿರ್ಬಂಧಿಸುವ ಸಂಬಧ ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್​ನ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.ವಿಚಾರಣೆ ನಡೆಸಿದ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ರಾಜ್ಯ ಸರ್ಕಾರ, ಗೃಹ ಇಲಾಖೆ, ಹುಬ್ಭಳ್ಳಿ ಕಮಿಷನರ್​ಗೆ ನೋಟಿಸ್ ನೀಡಿದೆ.

ಹೈಕೋರ್ಟ್ ಇಂದು ಹೇಳಿದ್ದೇನು?

ಅ.18 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಆರ್​ಎಸ್​​ಎಸ್ ಪ್ರಶ್ನೆ ಮಾಡಿ ಅರ್ಜಿ ಸಲ್ಲಿಸಿತ್ತು. ಈ ವಿಚಾರ ಸರ್ಕಾರಕ್ಕೆ ನೋಟಿಸ್ ನೀಡಿರುವ ಹೈಕೋರ್ಟ್​ನ ಧಾರವಾಡ ಪೀಠ, ಅನುಮತಿಯಿಲ್ಲದೇ 10 ಜನ ಜನ ಸೇರಿದರೆ ಅಪರಾಧವೆಂದು ಸರ್ಕಾರದ ಆದೇಶದಲ್ಲಿದೆ. ರಸ್ತೆ, ಪಾರ್ಕ್, ಮೈದಾನ, ಕೆರೆ ಇತ್ಯಾದಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ. ಪೊಲೀಸ್ ಕಾಯ್ದೆಯಲ್ಲಿ ಇರುವ ಅಧಿಕಾರವನ್ನು ಸರ್ಕಾರ ಆದೇಶದ ಮೂಲಕ ಚಲಾಯಿಸಿದೆ. ಸಂವಿಧಾನದ ಆರ್ಟಿಕಲ್ 19 (1)A, B, ನೀಡಿರುವ ಹಕ್ಕನ್ನು ಸರ್ಕಾರ ಕಿತ್ತುಕೊಂಡಿದೆ. ಸಂವಿಧಾನ ನೀಡಿರುವ ಹಕ್ಕನ್ನು ಸರ್ಕಾರಿ ಆದೇಶ ಕಿತ್ತುಕೊಳ್ಳಲಾಗದು ಎಂದು ಅಭಿಪ್ರಾಯಪಟ್ಟಿದೆ.

ಕಲಬುರಗಿ ಚಿತ್ತಾಪುರದ ಆರ್​ಎಸ್​ಎಸ್ ಪಥಸಂಚಲನ

ಕಲಬುರಗಿ ಚಿತ್ತಾಪುರದ ಆರ್​ಎಸ್​ಎಸ್ ಪಥಸಂಚಲನ ವಿಚಾರವಾಗಿ ಹೈಕೋರ್ಟ್​ನ ಕಲಬುರಗಿ ಪೀಠ ಈಗಾಗಲೇ ವಿಚಾರಣೆ ನಡೆಸಿದ್ದು, ಚಿತ್ತಾಪುರದಲ್ಲಿನ ಪರಿಸ್ಥಿತಿ ಪರಿಗಣಿಸಿ ಅಕ್ಟೋಬರ್ 30ರಂದು ವರದಿ ನೀಡುವಂತೆ ಕೋರ್ಟ್ ತಿಳಿಸಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow