BREAKING NEWS.. ಟೆಸ್ಟ್ ಕ್ರಿಕೆಟ್ʼಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ..!

ರೋಹಿತ್ ಶರ್ಮಾ ಅವರ ಹಾದಿಯಲ್ಲಿಯೇ ಸ್ಟಾರ್ ಕ್ರಿಕೆಟಿಗ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ್ದಾರೆ. ಹೌದು ಇನ್ಸ್ಟಾಗ್ರಾಮ್ನಲ್ಲಿ ನಿವೃತ್ತಿ ಕುರಿತಾದ ಪೋಸ್ಟ್ ಹಂಚಿಕೊಳ್ಳುವ ಮೂಲಕ ಕೊಹ್ಲಿ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಇದರೊಂದಿಗೆ ಕಿಂಗ್ ಕೊಹ್ಲಿಯ 14 ವರ್ಷದ ಟೆಸ್ಟ್ ಕೆರಿಯರ್ ಅಂತ್ಯಗೊಂಡಂತಾಗಿದೆ.
ಟೆಸ್ಟ್ನಲ್ಲಿ ವಿರಾಟ್ ಕೊಹ್ಲಿ ಅತ್ಯಂತ ಪರಿಣಾಮಕಾರಿ ಪ್ರದರ್ಶನ ನೀಡಿದ್ದಾರೆ. ಈವರೆಗೆ 123 ಪಂದ್ಯಗಳನ್ನು ಆಡಿರುವ ಅವರು 46.9 ಸರಾಸರಿಯಲ್ಲಿ 9,230 ರನ್ ಗಳಿಸಿದ್ದಾರೆ. ಇದರ ನಡುವೆ 254* ಬಾರಿಸಿದ್ದು ಅವರು ವೈಯುಕ್ತಿಕ ಗರಿಷ್ಠ ಸ್ಕೋರ್. ಅಲ್ಲದೆ ಟೆಸ್ಟ್ ಕ್ರಿಕೆಟ್ನಲ್ಲಿ 31 ಅರ್ಧಶತಕಗಳು ಮತ್ತು 30 ಶತಕಗಳನ್ನು ಸಹ ಬಾರಿಸಿದ್ದಾರೆ.
ವಿರಾಟ್ ಕೊಹ್ಲಿ 2011 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದರು. 14 ವರ್ಷಗಳ ವೃತ್ತಿಯಲ್ಲಿ, ಅವರು 123 ಟೆಸ್ಟ್ ಪಂದ್ಯಗಳಲ್ಲಿ 9,230 ರನ್ಗಳನ್ನು ಗಳಿಸಿದ್ದಾರೆ, ಸರಾಸರಿ 46.85. 30 ಶತಕಗಳು ಮತ್ತು 31 ಅರ್ಧಶತಕಗಳೊಂದಿಗೆ, ಕೊಹ್ಲಿ ಭಾರತದ ನಾಲ್ಕನೇ ಅತಿ ಹೆಚ್ಚು ರನ್ ಗಳಿಸಿದ ಟೆಸ್ಟ್ ಆಟಗಾರರಾಗಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






