BREAKING.. 'ಮಠ' ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣು.!

ನವೆಂಬರ್ 3, 2024 - 12:11
 0  32
BREAKING.. 'ಮಠ' ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣು.!

ಬೆಂಗಳೂರು: ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

 3 ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್‌ ಚಿತ್ರದ ಮೂಲಕ ಮನೆಮಾತಾಗಿದ್ದರು.

ಗುರುಪ್ರಸಾದ್ ಅವರು ಸಾಲದ ಬಾಧೆಯಿಂದ ಬಳಲುತ್ತಿದ್ದರು. ಅವರು ನಿರ್ದೇಶನ ಮಾಡಿದ್ದ ಇತ್ತೀಚೆಗಿನ ಸಿನಿಮಾ ‘ರಂಗನಾಯಕ’ ಹೀನಾಯ ಸೋಲು ಕಂಡಿತ್ತು.  ‘ರಂಗನಾಯಕ’ ಸಿನಿಮಾದ ಫ್ಲಾಪ್ ಬಳಿಕ ಗುರುಪ್ರಸಾದ್ ಸಾಲಗಳಿಗೆ ಸಿಲುಕಿದ್ದರು. ಮಾತ್ರವಲ್ಲದೆ ಕೆಲ ತಿಂಗಳ ಹಿಂದೆ ಗುರುಪ್ರಸಾದ್ ಎರಡನೇ ಮದುವೆ ಸಹ ಆಗಿದ್ದರು ಎನ್ನಲಾಗುತ್ತಿದೆ. 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow