Bus Strike: ಆದೇಶ ಉಲ್ಲಂಘಿಸಿದ್ದಕ್ಕೆ ಹೈಕೋರ್ಟ್ ತರಾಟೆ: ಸಾರಿಗೆ ನೌಕರರ ಮುಷ್ಕರ ವಾಪಸ್!

ಆಗಸ್ಟ್ 5, 2025 - 16:18
 0  18
Bus Strike: ಆದೇಶ ಉಲ್ಲಂಘಿಸಿದ್ದಕ್ಕೆ ಹೈಕೋರ್ಟ್ ತರಾಟೆ: ಸಾರಿಗೆ ನೌಕರರ ಮುಷ್ಕರ ವಾಪಸ್!

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ನೌಕರರು ಇಂದು ಬಸ್ ನಿಲ್ಲಿಸಿ ಮುಷ್ಕರ ಆರಂಭಿಸಿದ್ದರು. ಮುಷ್ಕರದ ಪರಿಣಾಮವಾಗಿ ಹಲವೆಡೆ ಸಾರಿಗೆ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಇನ್ನೂ ನಿನ್ನೆಯಷ್ಟೆ   ಸಂಬಂಧ ನಡೆದ ವಿಚಾರಣೆಯಲ್ಲಿ ಹೈಕೋರ್ಟ್ ಒಂದು ದಿನದ ಮಟ್ಟಿಗೆ ಮುಷ್ಕರ ನಡೆಯಬಾರದು ಎಂಬ ಸೂಚನೆ ನೀಡಿದ್ದರೂ, ಆದೇಶವನ್ನು ಲೆಕ್ಕಿಸದೇ ಅನೇಕ ಕಡೆಗಳಲ್ಲಿ ನೌಕರರು ಮುಷ್ಕರ ನಡೆಸುತ್ತಿದ್ದಾರೆ.

ಇದರ ಹಿನ್ನೆಲೆಯಲ್ಲಿ ಹೈಕೋರ್ಟ್ ಸಾರಿಗೆ ನೌಕರರ ಪರ ವಕೀಲರಿಗೆ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳಿಗೆ ನೌಕರರ ಅಸಹಕಾರ ಕಾರಣವಾಗಿದೆ ಎಂದು ನ್ಯಾಯಪೀಠ ಹೇಳಿದೆ. ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಸಿಜೆ ವಿಭು ಬಕ್ರು, ನ್ಯಾ.ಸಿ.ಎಂ ಜೋಷಿ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ನಡೆಯಿತು. ಸರ್ಕಾರಿ ಪರ ವಕೀಲರಾಗಿ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು

ಮುಷ್ಕರ ನಿರ್ಧಾರ ಕಾನೂನು ಬಾಹಿರವಾಗಿದೆ. ಹೈಕೋರ್ಟ್ ಆದೇಶವಿದ್ದರೂ ನೀವು ಅದನ್ನು ಪಾಲಿಸಿಲ್ಲ. ಎಸ್ಮಾ ಕಾಯ್ದೆಯಡಿ ಸಂಘಟನೆಯ ಪದಾಧಿಕಾರಿಗಳನ್ನು ಬಂಧಿಸಬಹುದು. ನಾಳೆ ಮುಷ್ಕರ ನಿಂತಿದೆ ಎಂಬುದನ್ನ ಕೋರ್ಟ್ಗೆ ಹೇಳಬೇಕು ಎಂದು ತಾಕೀತು ಮಾಡಿದರು. ಇದಕ್ಕೆ ಉತ್ತರಿಸಿದ ನೌಕರರ ಸಂಘಟನೆ ಪರ ವಕೀಲರು, ನಾಳೆ ಮುಷ್ಕರ ನಡೆಸುವುದಿಲ್ಲ ಎಂದು ಹೇಳಿದರು. ಬಳಿಕ ಕೋರ್ಟ್ವಿಚಾರಣೆಯನ್ನ ಆಗಸ್ಟ್‌ 7ಕ್ಕೆ ಮುಂದೂಡಿತು

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow