RCB ಮುಂದಿನ ಟಾರ್ಗೆಟ್ ಚೆನ್ನೈ: ಪಂದ್ಯ ಯಾವಾಗ? ಎಲ್ಲಿ? - ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!

IPL 2025 ಈಗಾಗಲೇ ಶುರುವಾಗಿದ್ದು, ಮೊದಲ ಉದ್ಘಾಟನಾ ಪಂದ್ಯದಲ್ಲೇ RCB ಕೋಲ್ಕತ್ತಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.
ಆರ್ಸಿಬಿ ಮುಂದಿನ ಪಂದ್ಯ ಇದೇ ವಾರ ಶುಕ್ರವಾರದಂದು ನಡೆಯಲಿದೆ. ಅಂದರೆ ಮಾರ್ಚ್ 29 ರಂದು ಎರಡನೇ ಪಂದ್ಯ ನಡೆಯಲಿದೆ. ವಿಶೇಷ ಅಂದ್ರೆ ಶುಕ್ರವಾರ, ಆರ್ಸಿಬಿ ಅಭಿಮಾನಿಗಳ ಬದ್ಧವೈರಿ ತಂಡ ಸಿಎಸ್ಕೆ ವಿರುದ್ಧ ಮ್ಯಾಚ್ ಇದೆ. ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡಗಳ ನಡುವೆ ಕಾದಾಟ ನಡೆಯಲಿದೆ.
ಶುಕ್ರವಾರ ಸಂಜೆ 7 ಗಂಟೆಗೆ ಟಾಸ್ ಪ್ರಕ್ರಿಯೆ, 7.30 ರಿಂದ ಪಂದ್ಯಗಳು ಆರಂಭವಾಗಲಿದೆ. ಚೆನ್ನೈನ ಎಂ.ಚಿದಂಬರಂ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದೆ. ರೋಚಕ ಪಂದ್ಯವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಈಗಾಗಲೇ ಟಿಕೆಟ್ ಖರೀದಿಸಿ ತುದಿಗಾಲಲ್ಲಿ ನಿಂತಿದ್ದಾರೆ.
ಇನ್ನು ನಿನ್ನೆ ನಡೆದ ಪಂದ್ಯದಲ್ಲಿ ಸಿಎಸ್ಕೆ ಮುಂಬೈ ವಿರುದ್ಧ 4 ವಿಕೆಟ್ಗಳ ಜಯಗಳಿಸಿದೆ. ಎರಡೂ ತಂಡಗಳು ಒಂದೊಂದು ಗೆಲುವು ಸಾಧಿಸಿದ್ದು, ಮತ್ತೊಂದು ಗೆಲುವಿಗಾಗಿ ಎದುರು ನೋಡುತ್ತಿವೆ.
ನಿಮ್ಮ ಪ್ರತಿಕ್ರಿಯೆ ಏನು?






