Champions Trophy 2025: ಭದ್ರತೆ ನೀಡುವಲ್ಲಿ ವಿಫಲ: ಉದ್ಯೋಗ ಕಳೆದುಕೊಂಡ 100ಕ್ಕೂ ಹೆಚ್ಚು ಪೊಲೀಸರು!

ಫೆಬ್ರವರಿ 27, 2025 - 09:05
 0  13
Champions Trophy 2025: ಭದ್ರತೆ ನೀಡುವಲ್ಲಿ ವಿಫಲ: ಉದ್ಯೋಗ ಕಳೆದುಕೊಂಡ 100ಕ್ಕೂ ಹೆಚ್ಚು ಪೊಲೀಸರು!

2025 ಚಾಂಪಿಯನ್ಸ್ ಟ್ರೋಫಿಗೆ ಪಾಕಿಸ್ತಾನ ಭಾರೀ ಭದ್ರತೆಯನ್ನು ಏರ್ಪಡಿಸಿದೆ. ಆದರೆ, ಹೆಚ್ಚಿನ ಕೆಲಸದ ಹೊರೆಯಿಂದಾಗಿ, 100 ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗಲು ಆಸಕ್ತಿ ಹೊಂದಿರಲಿಲ್ಲ. ಪರಿಣಾಮವಾಗಿ, ಪಾಕಿಸ್ತಾನ ಸರ್ಕಾರ ಅವರನ್ನು ಕೆಲಸದಿಂದ ವಜಾಗೊಳಿಸಿತು. ಪೊಲೀಸರಿಗೆ ಸಾಕಷ್ಟು ಸೌಲಭ್ಯಗಳ ಕೊರತೆ ಮತ್ತು ದೀರ್ಘ ಕೆಲಸದ ಸಮಯವು ತೀವ್ರ ಟೀಕೆಗೆ ಕಾರಣವಾಗಿದೆ. ನಿರ್ಧಾರವನ್ನು ನೆಟಿಜನ್ಗಳು ಮತ್ತು ವಿಮರ್ಶಕರು ಬಲವಾಗಿ ವಿರೋಧಿಸುತ್ತಿದ್ದಾರೆ.

ಹೌದು ಪಂಜಾಬ್‌ ಪೊಲೀಸರ ಮಾಹಿತಿ ಪ್ರಕಾರ, ಸೇವಯಿಂದ ವಜಾಗೊಳಿಸಲಾದ ಅಧಿಕಾರಿಗಳು ಹಲವು ಸಂದರ್ಭದಲ್ಲಿ ಗೈರಾಗಿದ್ದರು. ಅಲ್ಲದೇ ಚಾಂಪಿಯನ್ಸ್‌ ಟ್ರೋಫಿ ಟೂರ್ನಿ ವೇಳೆ ಭದ್ರತಾ ಕಾರ್ಯ ನಿರ್ವಹಿಸಲು ನಿರಾಕರಿಸಿದ್ದರು ಎಂದು ತಿಳಿದುಬಂದಿದೆ. 

ಈ ಬಾರಿ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೆ ಲಾಹೋರ್‌ನ ಗಡಾಫಿ, ಕರಾಚಿ ಹಾಗೂ ರಾವಲ್ಪಿಂಡಿ ಮೈದಾನಗಳು ಆತಿಥ್ಯ ವಹಿಸಿವೆ. ಹಾಗಾಗಿ ಗೊತ್ತುಪಡಿಸಿದ ಹೋಟೆಲ್‌ಗಳಿಗೆ ಪ್ರವಾಣಿಸುವ ತಂಡಗಳಿಗೆ ಭದ್ರತೆ ಒದಗಿಸಲು ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು. ಆದ್ರೆ ಅವರೆಲ್ಲರೂ ಜವಾಬ್ದಾರಿ ತೆಗೆದುಕೊಳ್ಳಲು ಸಂಪೂರ್ಣವಾಗಿ ನಿರಾಕರಿಸಿದ್ದರು. ಈ ಹಿನ್ನೆಲೆ ಕರ್ತವ್ಯದಿಂದ ವಜಾಗೊಳಿಸಲಾಗಿದೆ ಎಂದು ಹೇಳಲಾಗಿದೆ. 

ಇತ್ತೀಚೆಗಷ್ಟೇ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ವೀಕ್ಷಣೆಗೆ ಆಗಮಿಸಿರುವ ವಿದೇಶಿಯರನ್ನು ಅಪಹರಿಸಿ ಸುಲಿಗೆ ಮಾಡಲು ಸಂಚು ರೂಪಿಸಲಾಗುತ್ತಿದೆ ಎಂದು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಎಚ್ಚರಿಕೆ ನೀಡಿತ್ತು. ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಪ್ರಾಂತ್ಯದಿಂದ ಸಂಭಾವ್ಯ ಬೆದರಿಕೆಯ ಬಗ್ಗೆ ಪಾಕ್ ಇಂಟಲಿಜೆನ್ಸ್ ವರದಿ ನೀಡಿತ್ತು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow