Champions Trophy 2025: ಚಾಂಪಿಯನ್ಸ್ ಟ್ರೋಫಿಯಿಂದ ಜಸ್ಪ್ರೀತ್ ಬುಮ್ರಾ ಔಟ್!

ಫೆಬ್ರವರಿ 12, 2025 - 16:10
 0  11
Champions Trophy 2025: ಚಾಂಪಿಯನ್ಸ್ ಟ್ರೋಫಿಯಿಂದ ಜಸ್ಪ್ರೀತ್ ಬುಮ್ರಾ ಔಟ್!

 ಐಸಿಸಿ ಚಾಂಪಿಯನ್ಸ್ ಟ್ರೋಫಿ ಹೊಸ್ತಿಲಲ್ಲಿ ಟೀಂ ಇಂಡಿಯಾಗೆ ಮತ್ತೊಂದು ಆಘಾತ ಎದುರಾಗಿದೆ.ಟೂರ್ನಿ ಪ್ರಾರಂಭವಾಗಲು ಇನ್ನೇನು ವಾರ ಉಳಿದಿರುವಾಗ ಬೆನ್ನು ನೋವಿನ ಸಮಸ್ಯೆಯ ಕಾರಣ ಜಸ್​ಪ್ರೀತ್ ಬುಮ್ರಾ ಸಹ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಬುಮ್ರಾ ಅವರ ಅಲಭ್ಯತೆಯು ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯನ್ನು ಉಂಟು ಮಾಡಲಿದೆ.

ಹೌದು, ಚಾಂಪಿಯನ್ಸ್​ ಟ್ರೋಫಿ ತಂಡದಲ್ಲಿ ಸ್ಥಾನ ಪಡೆದಿದ್ದ ವೇಗಿ ಜಸ್ಪ್ರೀತ್​ ಬುಮ್ರಾ ಮತ್ತು ಆರಂಭಿಕ ಬ್ಯಾಟರ್​​ ಜೈಸ್ವಾಲ್​ ಇಬ್ಬರು ಈ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಬುಮ್ರಾ ಇತ್ತೀಚೆಗೆ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್​ ಗವಾಸ್ಕರ್​ ಟ್ರೋಫಿಯಲ್ಲಿ 150ಕ್ಕೂ ಹೆಚ್ಚು ಓವರ್​ ಬೌಲ್​ ಮಾಡಿ ಬೆನ್ನು ನೋವಿಗೆ ತುತ್ತಾಗಿದ್ದರು.

ಇದರಿಂದಾಗಿ 5ನೇ ಪಂದ್ಯದಲ್ಲಿ ಅರ್ಧಕ್ಕೆ ಮೈದಾನ ತೊರೆದಿದ್ದ ಅವರು ಬಳಿಕ ಬೌಲಿಂಗ್​ ಮಾಡಲು ಸಾಧ್ಯವಾಗಿರಲಿಲ್ಲ. ಬೆನ್ನು ನೋವಿನಿಂದ ಬಳಲುತ್ತಿರುವ ಬುಮ್ರಾ ಇನ್ನೂ ಚೇತರಿಸಿಕೊಂಡಿಲ್ಲ. ಈ ಹಿನ್ನೆಲೆ ಚಾಂಪಿಯನ್ಸ್​ ಟ್ರೋಫಿಯ ಅಂತಿಮ ತಂಡದಿಂದ ಹೊರ ಬಿದ್ದಿದ್ದಾರೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow