Champions Trophy 2025: ಭಾರತದ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ..!

ಮಾರ್ಚ್ 4, 2025 - 14:25
 0  9
Champions Trophy 2025: ಭಾರತದ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ..!

 

2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಮೊದಲ ಸೆಮಿಫೈನಲ್ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿದೆ. ಈ ಮಹತ್ವದ ಪಂದ್ಯ ದುಬೈನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇನ್ನು ಈ ಪಂದ್ಯದ ಟಾಸ್ ನಡೆದಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಎರಡೂ ತಂಡಗಳು ಸೆಮಿಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ಗುಂಪು ಹಂತದಲ್ಲಿ ಎರಡೂ ತಂಡಗಳು ಉತ್ತಮ ಪ್ರದರ್ಶನ ನೀಡಿದ್ದು, ಟೀಂ ಇಂಡಿಯಾ ಆಡಿದ ಮೂರು ಪಂದ್ಯಗಳಲ್ಲೂ ಜಯ ಸಾಧಿಸಿದೆ. ಇತ್ತ, ಆಸ್ಟ್ರೇಲಿಯಾ 1 ಪಂದ್ಯವನ್ನು ಗೆದ್ದಿದ್ದರೆ 2 ಪಂದ್ಯ ಮಳೆಯಿಂದ ರದ್ದಾಗಿತ್ತು. ಈ ಎರಡೂ ತಂಡಗಳು ತಮ್ಮ ಮೂರನೇ ಪ್ರಶಸ್ತಿಯನ್ನು ಎದುರು ನೋಡುತ್ತಿವೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಎಲ್ಲಿ ನಡೆಯಲ್ಲಿದೆ?

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಪಂದ್ಯ ದುಬೈನ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2:30 ಕ್ಕೆ ಆರಂಭವಾಗಲಿದೆ. 

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಪಂದ್ಯವನ್ನು ಟಿವಿಯಲ್ಲಿ ಎಲ್ಲಿ ವೀಕ್ಷಿಸಬೇಕು?

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.

ಆಸ್ಟ್ರೇಲಿಯಾ ತಂಡ

ಕೂಪರ್ ಕಾನೊಲಿ, ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್ (ನಾಯಕ), ಮಾರ್ನಸ್ ಲಬುಶೇನ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್‌ವೆಲ್, ಬೆನ್ ದ್ವಾರಶುಯಿಸ್, ನಾಥನ್ ಎಲ್ಲಿಸ್, ಆಡಮ್ ಜಂಪಾ, ತನ್ವೀರ್ ಸಂಘ.

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow