Chikmagaluru: ಹಲ್ಲು ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣು..!

ಮಾರ್ಚ್ 23, 2025 - 14:08
 0  23
Chikmagaluru: ಹಲ್ಲು ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣು..!

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಭುವನಕೋಟೆ ಸಮೀಪದ ಸಾಲುಮರ ಗ್ರಾಮದಲ್ಲಿ ಅಪಘಾತದಲ್ಲಿ 17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿಘ್ನೇಶ್ (18) ಮೃತ ದುರ್ಧೈವಿಯಾಗಿದ್ದು,

ಮೃತ ಬಾಲಕ ಕೊಪ್ಪ ಪಟ್ಟಣದ ಐಟಿಐ ಕಾಲೇಜಿನಲ್ಲಿ ಮೊದಲ ವರ್ಷದ ಐಟಿಐ ಒದುತ್ತಿದ್ದ. ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ

ಕಳೆದ ನಾಲ್ಕು ವರ್ಷದ ಹಿಂದೆ ವಿಘ್ನೇಶ್ಗೆ ಅಪಘಾತವಾಗಿತ್ತು. ಆಗ ಅಪಘಾತದಲ್ಲಿ ತನ್ನ 17 ಹಲ್ಲುಗಳನ್ನ ಕಳೆದುಕೊಂಡಿದ್ದ. ಹಾಗಾಗಿ ಆಗಾಗ ಆಸ್ಪತ್ರೆಗೆ ಹೋಗಿ ಬರುತ್ತಿದ್ದ. ಸದಾ ಆಸ್ಪತ್ರೆಗೆ ಹೋಗಬೇಕು ಎಂದು ಬೇಜಾರಾಗಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಎದೆಮಟ್ಟಕ್ಕೆ ಬೆಳೆದು ನಿಂತ ಮಗ ಆತ್ಮಹತ್ಯೆಗೆ ಶರಣಾಗಿದ್ದಕ್ಕೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow