CM ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಾಂಬ್ ಬೆದರಿಕೆ!
ಬೆಂಗಳೂರು: ಶಾಲೆಗಳು, ಸರ್ಕಾರಿ ಕಚೇರಿಗಳಿಗೆ ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ಬಾಂಬ್ ಬೆದರಿಕೆ ಬರುತ್ತಲೇ ಇದೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನೆಗಳನ್ನು ಸ್ಫೋಟಿಸುವುದಾಗಿ ಹುಸಿ ಬೆದರಿಕೆ ಬಂದಿದೆ. ಇಮೇಲ್‌ನಲ್ಲಿ ಸಿಎಂ ಮತ್ತು ಡಿಸಿಎಂ ಮನೆಗಳಲ್ಲಿ 6 ಕಿಲೋಗ್ರಾಂಗಳಷ್ಟು ಆರ್‌ಡಿಎಕ್ಸ್ ಇರಿಸಲಾಗಿದೆ ಎಂದು ತಿಳಿಸಲಾಗಿದೆ.
ತಮಿಳುನಾಡಿನ ವ್ಯಕ್ತಿಯೋರ್ವನಿಂದ ಬೆದರಿಕೆ ಸಂದೇಶ ಕಳುಹಿಸಿರುವ ಅನುಮಾನಗಳು ವ್ಯಕ್ತವಾಗಿದ್ದು, ಆತನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಆರ್ನಾ ಅಶ್ವಿನ್ ಶೇಖರ್ ಎಂಬಾತನ ಐಡಿಯಿಂದ ಡಿಸಿಎಂ ಡಿಕೆ ಶಿವಕುಮಾರ್ ಇ-ಮೇಲ್ ಐಡಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದೆ.
ಆರು ಆರ್‌ಡಿಎಕ್ಸ್ ಬಾಂಬ್ಗಳು ಇಬ್ಬರ ಮನೆಯಲ್ಲೂ ಫಿಕ್ಸ್ ಆಗಿದೆ. ರಿಮೋಟ್ ಮೂಲಕ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ಬಾಂಬ್ ಸ್ಕ್ವಾಡ್ ತಕ್ಷಣ ನಿವಾಸಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಇನ್ನು ಹುಸಿಬಾಂಬ್ ಕರೆ ಬಂದ ಹಿನ್ನೆಲೆ ಅಶ್ವತ್ಥ್ ನಾರಾಯಣಸ್ವಾಮಿ ಎಂಬುವವರ ದೂರು ಆಧರಿಸಿ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?