CM Siddaramaiah: ಪಾಕ್ ವಿರುದ್ಧ ಯುದ್ದ ಬೇಡ ಎಂದು ಈಗ ಉಲ್ಟಾ ಹೊಡೆದ್ರಾ ಸಿಎಂ ಸಿದ್ದರಾಮಯ್ಯ..!?

ಬೆಂಗಳೂರು: ಪಾಕಿಸ್ತಾನದ ಮೇಲೆ ಭಾರತ ಯುದ್ಧ ಮಾಡಬಾರದು ಎಂದು ಸಿದ್ದರಾಮಯ್ಯನವರು ಹೇಳಿಕೆ ಪಾಕಿಸ್ತಾನ ಮೀಡಯಾಗಳು ಸುದ್ದಿ ಪ್ರಸಾರ ಮಾಡಿವೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ಇದನ್ನೇ ಅಸ್ತ್ರವಾಗಿಸಿಕೊಂಡ ವಿರೋಧ ಪಕ್ಷ ಬಿಜೆಪಿ ನಾಯಕರು ಟೀಕಿಸುತ್ತಿದ್ದಾರೆ.
ಇನ್ನು ಇದಕ್ಕೆ ಇದೀಗ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಪಾಕಿಸ್ತಾನದ ವಿರುದ್ಧ ಯುದ್ಧ ಮಾಡುವುದೇ ಬೇಡವೆಂದು ನಾನು ಹೇಳಿಲ್ಲ. ಯುದ್ಧ ಅನಿವಾರ್ಯವಾದರೆ ಮಾತ್ರ ಯುದ್ಧ ಮಾಡಬೇಕು. ಯುದ್ಧದಿಂದಲೇ ಪರಿಹಾರ ಅಲ್ಲ, ಯುದ್ಧವೇ ಬೇಡವೇ ಬೇಡ ಎಂದು ನಾನು ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಯುದ್ಧ ಅನಿವಾರ್ಯವಾದಾಗ ಮಾತ್ರ ಮಾಡಬೇಕು. ಯುದ್ಧದಿಂದ ಪರಿಹಾರವಾಗಲು ಸಾಧ್ಯವಿಲ್ಲ. ಅನಿವಾರ್ಯವಾದಾಗ ಮಾತ್ರ ಮಾಡಬೇಕು. ಕೇಂದ್ರ ಸರ್ಕಾರದ ಭದ್ರತಾ ವ್ಯವಸ್ಥೆಯ ವೈಫಲ್ಯ ಇದೆ ಎಂದು ಹೇಳಿದ್ದೇನೆ. 26 ಜನ ಪ್ರವಾಸಿಗರು ಉಗ್ರರ ದಾಳಿಯಲ್ಲಿ ಅಸುನೀಗಿದ್ದಾರೆ. ಹಿಂದೆ ಪುಲ್ವಾಮಾ ದಾಳಿಯಲ್ಲಿ ಸೈನಿಕರು ಹುತಾತ್ಮರಾಗಿದ್ದರು. ಕೇಂದ್ರ ಸರ್ಕಾರ ಭದ್ರತೆಯನ್ನು ಸರಿಯಾದ ರೀತಿಯಲ್ಲಿ ಕೊಟ್ಟಿರಲಿಲ್ಲ. ತಕ್ಷಣಕ್ಕೆ ಯುದ್ಧ ಬೇಡ. ಆದರೆ ಯುದ್ಧ ಮಾಡಲೇಬಾರದು ಎಂದು ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






