CM ಸಿದ್ದರಾಮಯ್ಯ ಕೊಹ್ಲಿ ಅಭಿಮಾನಿಗಳ ಬಳಿ ಕ್ಷಮೆ ಕೇಳಬೇಕು: ಮಾಜಿ ಡಿವೈಎಸ್ಪಿ

ಜುಲೈ 20, 2025 - 11:44
ಜುಲೈ 20, 2025 - 11:47
 0  14
CM ಸಿದ್ದರಾಮಯ್ಯ ಕೊಹ್ಲಿ ಅಭಿಮಾನಿಗಳ ಬಳಿ ಕ್ಷಮೆ ಕೇಳಬೇಕು: ಮಾಜಿ ಡಿವೈಎಸ್ಪಿ

ಉಡುಪಿ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಆರ್ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಗೆ ಪೊಲೀಸ್ ಇಲಾಖೆಯಲ್ಲಿನ ರಾಜಕೀಯವೇ ಮೂಲ ಕಾರಣ ಎಂದು ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಮಾಡಿದ್ದಾರೆ.

ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ: “ಕರ್ನಾಟಕ ಸರ್ಕಾರ ಹೈಕೋರ್ಟಿಗೆ ಸಲ್ಲಿಸಿರುವ ವರದಿಯಲ್ಲಿ ಕ್ರಿಕೆಟ್ ತಾರೆ ವಿರಾಟ್ ಕೊಹ್ಲಿಯವರನ್ನು ಆರೋಪಿ ಸ್ಥಾನದಲ್ಲಿ ಉಲ್ಲೇಖಿಸಲಾಗಿದೆ. ಇದು ಅವರನ್ನು ಜೈಲಿಗೆ ಕಳುಹಿಸಲು ರೂಪಿಸಿರುವ ಸಂಚು. ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಹ್ಲಿಯ ಅಭಿಮಾನಿಗಳ ಕ್ಷಮೆ ಕೇಳಬೇಕು, ಎಂದು ಆಗ್ರಹಿಸಿದರು.

ಕಾಲ್ತುಳಿತ ಪ್ರಕರಣ ಸಂಬಂಧ ಸರ್ಕಾರ ಹೈಕೋರ್ಟ್ಗೆ ಸಲ್ಲಿಸಿರುವ ವರದಿಯಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಆರೋಪಿಯನ್ನಾಗಿ ಮಾಡಲಾಗಿದೆ. ಸರಕಾರದ ವರದಿಯನ್ನು ನಾನು ವಿರೋಧಿಸುತ್ತೇನೆ. ಬೆಂಗಳೂರಿನಲ್ಲಿ ಸಕ್ರಿಯವಾಗಿರುವ ಸ್ಮಗ್ಲಿಂಗ್ ಮಾಫಿಯಾ ಇದರ ಹಿಂದಿದೆ.

ಕೆಜೆ ಹಳ್ಳಿ ಮತ್ತು ಡಿಜೆ ಹಳ್ಳಿ ಗುಂಪುಗಳ ಸಹಾಯ ಪಡೆದು ಕಾಲ್ತುಳಿತ ನಡೆದ ಸ್ಥಳದಲ್ಲಿ ಗೊಂದಲ ಸೃಷ್ಟಿಸಲಾಗಿತ್ತು ಎಂದು ಆರೋಪಿಸಿರುವ ಅನುಪಮಾ ಶೆಣೈ, ಬಗ್ಗೆ ಮ್ಯಾಜಿಸ್ಟ್ರಿಯಲ್ ತನಿಖೆ ನಡೆಸುತ್ತಿರುವ ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಅವರಿಗೂ ಪತ್ರ ಬರೆದಿದ್ದೇನೆ ಎಂದರು.

ಬಿ. ದಯಾನಂದ್ ಅವರು ಮುಂದೆ ಡಿಜಿಪಿ ಮತ್ತು ಐಜಿಪಿ ಆಗಿ ನೇಮಕವಾಗುವುದನ್ನು ತಡೆಯುವ ಉದ್ದೇಶ ಕೃತ್ಯದ ಹಿಂದಿದೆ. ರನ್ಯಾ ರಾವ್ ಸ್ಮಗ್ಲಿಂಗ್ ಪ್ರಕರಣ ಮೂಲಕ ರಾಮಚಂದ್ರ ರಾವ್ ಅವರಿಗೆ ಹಿನ್ನಡೆಯಾಗುವಂತೆ ಮಾಡಲಾಯಿತು ಎಂದು ಶೆಣೈ ಹೇಳಿದರು. ಅಲ್ಲದೆ, ಸಲೀಂ ಅವರ ನೇಮಕಾತಿಯನ್ನು ಪ್ರಶ್ನಿಸಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow