Crime News: ವ್ಯಕ್ತಿಯ ಬಟ್ಟೆ ತೆಗೆದು ಕಟ್ಟಿಗೆಯಿಂದ ವ್ಯಕ್ತಿಯ ಬರ್ಬರ ಕೊಲೆ!

ಸೆಪ್ಟೆಂಬರ್ 20, 2025 - 22:04
 0  26
Crime News: ವ್ಯಕ್ತಿಯ ಬಟ್ಟೆ ತೆಗೆದು ಕಟ್ಟಿಗೆಯಿಂದ ವ್ಯಕ್ತಿಯ ಬರ್ಬರ ಕೊಲೆ!

ಕಲಬುರ್ಗಿ:- ಕಲಬುರಗಿ ನಗರದ ಕುಷ್ಟರೋಗಿಗಳ ಕಾಲೋನಿಯಲ್ಲಿ ಬೆತ್ತಲೆ ಮಾಡಿ ಕಟ್ಟಿಗೆಯಿಂದ ಹೊಡೆದು ವ್ಯಕ್ತಿಯನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜರುಗಿದೆ.

ಕೊಲೆಯಾದ ವ್ಯಕ್ತಿಯನ್ನು ಚಾಂದ್‌ಸಾಬ್ ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಚಾಂದ್‌ಸಾಬ್ ಮನೆಯಲ್ಲೇ ಪರಿಚಿತರೊಂದಿಗೆ ಎಣ್ಣೆ ಪಾರ್ಟಿ ನಡೆಸಿದ್ದರು. ಈ ವೇಳೆ ಗಲಾಟೆ ನಡೆದು ಚಾಂದ್‌ಸಾಬ್‌ನನ್ನು ಬೆತ್ತಲೆ ಮಾಡಿ ಕಟ್ಟಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮೃತರ ಪತ್ನಿ ದೆಹಲಿಯಲ್ಲಿ ವಾಸವಿದ್ದು, ಪತಿಯ ಸಾವಿನ ಬಗ್ಗೆ ತಿಳಿದು ಕಲಬುರಗಿಯತ್ತ ಆಗಮಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ರಾಘವೇಂದ್ರ ನಗರ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow