CRPF ವಾಹನ ಕಂದಕಕ್ಕೆ ಉರುಳಿ ಮೂವರು ಹುತಾತ್ಮ, ಹಲವರಿಗೆ ಗಾಯ!

ಆಗಸ್ಟ್ 7, 2025 - 14:06
 0  10
CRPF ವಾಹನ ಕಂದಕಕ್ಕೆ ಉರುಳಿ ಮೂವರು ಹುತಾತ್ಮ, ಹಲವರಿಗೆ ಗಾಯ!

ಶ್ರೀನಗರ:- ಜಮ್ಮು ಮತ್ತು ಕಾಶ್ಮೀರದ ಬಸಂತ್‌ಗಢದ ಕಾಂಡ್ವಾ ಬಳಿ ಸಿಆರ್‌ಪಿಎಫ್ ವಾಹನ ಕಂದಕಕ್ಕೆ ಉರುಳಿದ ಪರಿಣಾಮ ಮೂವರು ಹುತಾತ್ಮರಾಗಿದ್ದು, ಹಲವರಿಗೆ ಗಂಭೀರ ಗಾಯಗಳಾಗಿದೆ.

ಬಸಂತ್‌ಗಢದಿಂದ ಕಾರ್ಯಾಚರಣೆ ಮುಗಿಸಿ ಗುರುವಾರ ರಾತ್ರಿ ಸಿಬ್ಬಂದಿ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. 187ನೇ ಬೆಟಾಲಿಯನ್‌ಗೆ ಸೇರಿದ ವಾಹನದಲ್ಲಿ 23 ಸಿಬ್ಬಂದಿ ಇದ್ದರು, ಅಪಘಾತದಲ್ಲಿ ಮೂವರು ಸಿಆರ್‌ಪಿಎಫ್ ಸಿಬ್ಬಂದಿ ಮೃತಪಟ್ಟಿದ್ದು 16 ಮಂದಿ ಗಾಯಗೊಂಡಿದ್ದಾರೆ.

ಪೊಲೀಸರು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಎಂದು ಹೆಚ್ಚುವರಿ ಎಸ್‌ಪಿ ಉಧಂಪುರ ಸಂದೀಪ್ ಭಟ್ ಅವರು ಮಾಹಿತಿ ನೀಡಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow